Webdunia - Bharat's app for daily news and videos

Install App

ತಮಿಳು ಚಿತ್ರರಂಗದ ಹಿರಿಯ ನಟಿ ಮನೋರಮಾ ಇನ್ನಿಲ್ಲ

Webdunia
ಭಾನುವಾರ, 11 ಅಕ್ಟೋಬರ್ 2015 (11:00 IST)
ತಮಿಳು ಚಿತ್ರರಂಗದ ಹಿರಿಯ ನಟಿ ಮನೋರಮಾ ಚೆನ್ನೈನಲ್ಲಿ ಶನಿವಾರ ತಡರಾತ್ರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಆಚಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿದ್ದ ಮನೋರಮಾ ಅವರು 1200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ 1000ಕ್ಕೂ ಹೆಚ್ಚು ನಾಟಕಗಳಲ್ಲಿ ಪಾತ್ರವಹಿಸಿದ್ದಾರೆ. 
 
ಅಣ್ಣಾ ದೊರೈ, ಎಂ.ಜಿ. ರಾಮಚಂದ್ರನ್, ಕರುಣಾನಿಧಿ, ಎನ್.ಟಿ.ರಾಮರಾವ್ ಮತ್ತು ಜೆ. ಜಯಲಲಿತಾ ಹೀಗೆ ಒಟ್ಟು ಐವರು ಮುಖ್ಯಮಂತ್ರಿಗಳ ಜತೆ ಮನೋರಮಾ ನಟನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 
 
ಶಿವಾಜಿಗಣೇಶನ್, ರಜನಿಕಾಂತ್ ಮತ್ತು ಕಮಲಾಹಾಸನ್ ಮುಂತಾದ ಅನೇಕ ಖ್ಯಾತ ನಟರ ಜತೆ ಕೂಡ ಅವರು ಚಿತ್ರಗಳಲ್ಲಿ ನಟಿಸಿದ್ದಾರೆ. ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಮನೋರಮಾ ಪುದಿಯಾ ಪದೈ ಚಿತ್ರದಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಮನೋರಮಾ ಗಳಿಸಿದ್ದಾರೆ. 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments