Select Your Language

Notifications

webdunia
webdunia
webdunia
webdunia

750ಕ್ಕೂ ಅಧಿಕ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದ ಟಾಲಿವುಡ್‌ ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ಇನ್ನಿಲ್ಲ

Kota Srinivasa Rao passes away, Tollywood cinema, Sandalwood cinema

Sampriya

ಹೈದರಾಬಾದ್ , ಭಾನುವಾರ, 13 ಜುಲೈ 2025 (10:13 IST)
Photo Credit X
ಹೈದರಾಬಾದ್:  ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಹಲವು ಚಿತ್ರರಂಗದಲ್ಲಿ 750ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟ ಶ್ರೀನಿವಾವಾಸ ರಾವ್ ಭಾನುವಾರ ನಿಧನರಾದರು. 83 ವರ್ಷದ ಅವರು 

ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೈದರಾಬಾದ್​ನಲ್ಲಿರುವ ತಮ್ಮ ನಿವಾಸದಲ್ಲಿಯೇ ಇಂದು ಮುಂಜಾನೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. 83 ವರ್ಷದ ಅವರು ವಯೋಸಹಜ ಕಾಯಿಲೆ ಹಾಗೂ ಸಮಸ್ಯೆಯಿಂದ ಬಳಲುತ್ತಿದ್ದರು.  

ನಾಲ್ಕು ದಶಕಗಳ ಕಾಲ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ ಅವರು, ತಮ್ಮ ವೃತ್ತಿಜೀವನದಲ್ಲಿ ಹಲವು ವಿಶಿಷ್ಟ ಪಾತ್ರಗಳನ್ನು ನಿರ್ವಹಿಸಿದ್ದಾರೆ. ರಂಗಭೂಮಿಯ ಹಿನ್ನಲೆಯಿಂದ ಬಂದ ಶ್ರೀನಿವಾಸ ರಾವ್​, ಹಲವು ವರ್ಷಗಳ ಕಾಲ ಚಿತ್ರಪ್ರೇಮಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

1978ರಲ್ಲಿ ಪ್ರಾಣಂ ಖರೀಧು ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು​, ತಮಿಳು, ಹಿಂದಿ ಮತ್ತು ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.  

ಕೋಟ ಶ್ರೀನಿವಾಸ್ ರಾವ್ ಅವರು ಕೇವಲ ನಟರಲ್ಲ. ರಾಜಕೀಯಕ್ಕೂ ಪ್ರವೇಶಿಸಿ ಯಶಸ್ಸು ಕಂಡಿದ್ದರು. 1999ರಿಂದ 2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡದ ಲೇಡಿ ಕಮಿಷನರ್, ರಕ್ತ ಕಣ್ಣೀರು, ಲವ್, ನಮ್ಮ ಬಸವ, ನಮ್ಮಣ್ಣ, ಶ್ರೀಮತಿ, ಕಬ್ಜಾ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು.

ಅವರಿಗೆ ಪತ್ನಿ ರುಕ್ಮಿಣಿ, ಇಬ್ಬರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ. ಕೋಟ ಶ್ರೀನಿವಾಸ್ ಅವರ ಮಗ ಕೋಟ ವೆಂಕಟ ಆಂಜನೇಯ ಪ್ರಸಾದ್ ಅವರು ಚಿತ್ರರಂಗಕ್ಕೆ ಪ್ರವೇಶಿಸುವ ಹಂತದಲ್ಲಿದ್ದಾಗ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರು. ಮಗನ ಅಕಾಲಿಕ ಮರಣದಿಂದ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕೋರ್ಟ್‌ ಅನುಮತಿ ಬೆನ್ನಲ್ಲೇ ಡೆವಿಲ್ ಶೂಟಿಂಗ್‌ಗೆ ಸೋಮವಾರ ವಿದೇಶಕ್ಕೆ ಪ್ರಯಾಣ