ಚೆನ್ನೈ: ದಳಪತಿ ವಿಜಯ್, ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ ವಾರಿಸು ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ಮುಂದಿನ ವರ್ಷ ಜನವರಿಯಲ್ಲಿ ಸಂಕ್ರಾಂತಿಗೆ ಸಿನಿಮಾ ರಿಲೀಸ್ ಆಗಲಿದೆ. ಅಂದರೆ ಮುಂಬರುವ ಜನವರಿ 15 ರಂದು ಸಿನಿಮಾ ಥಿಯೇಟರ್ ಗೆ ಬರಲಿದೆ ಎಂಬ ಸುದ್ದಿ ಬಂದಿದೆ.
ವಿಜಯ್ ಬರ್ತ್ ಡೇ ದಿನ ವಾರಿಸು ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಚಿತ್ರೀಕರಣದ ಕೆಲವು ದೃಶ್ಯಗಳು ಆನ್ ಲೈನ್ ನಲ್ಲಿ ಸೋರಿಕೆಯಾಗಿ ಸುದ್ದಿಯಾಗಿತ್ತು. ಇದೀಗ ಚಿತ್ರತಂಡ ಸಿನಿಮಾ ಬಿಡುಗಡೆ ಬಗ್ಗೆ ಯೋಜನೆ ಹಾಕಿಕೊಂಡಿದೆ ಎಂಬ ಸುದ್ದಿ ಬಂದಿದೆ.