Publish Date: Wed, 24 Jul 2024 (12:32 IST)
Updated Date: Wed, 24 Jul 2024 (12:34 IST)
ಬೆಂಗಳೂರು: ಪತಿ ದರ್ಶನ್ ರನ್ನು ರೇಣುಕಾಸ್ವಾಮಿ ಹತ್ಯೆ ಕೇಸ್ ನಿಂದ ಬಚಾವ್ ಮಾಡಲು ಏನೆಲ್ಲಾ ಪ್ರಯತ್ನ ಮಾಡುತ್ತಿರುವ ಪತ್ನಿ ವಿಜಯಲಕ್ಷ್ಮಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ ದರ್ಶನ್ ಸಹೋದರ ದಿನಕರ್ ತೂಗುದೀಪ ಜೊತೆಗೆ ವಿಜಯಲಕ್ಷ್ಮಿ, ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ನಿನ್ನೆಯೇ ಅವರನ್ನು ಭೇಟಿ ಮಾಡಲು ವಿಜಯಲಕ್ಷ್ಮಿ ಕಾಲಾವಕಾಶ ಕೇಳಿದ್ದರಂತೆ. ಅದರಂತೆ ಇಂದು ಬಾವ ದಿನಕರ್ ಜೊತೆ ಬಂದಿದ್ದಾರೆ.
ನಿನ್ನೆಯೇ ಡಿಸಿಎಂ ಡಿಕೆ ಶಿವಕುಮಾರ್ ಈ ನೆಲದ ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು. ಇದರ ಹೊರತಾಗಿ ಏನಾದರೂ ಅನ್ಯಾಯವಾಗಿದ್ದರೆ ಸರಿಪಡಿಸೋಣ ಎಂದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದರು. ಇಂದು ವಿಜಯಲಕ್ಷ್ಮಿ ಕೂಡಾ ಡಿಸಿಎಂ ಬಳಿ ಕಾನೂನಿನ ಚೌಕಟ್ಟಿನಲ್ಲಿಯೇ ಏನಾದರೂ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರಂತೆ.
ದರ್ಶನ್ ಜೈಲಿಗೆ ಹೋಗಿ ತಿಂಗಳೇ ಕಳೆದಿದೆ. ಇನ್ನೂ ಬೇಲ್ ಸಿಕ್ಕಿಲ್ಲ. ಬೇಲ್ ಸಿಗುವ ಹಾಗೆ ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಿ ಎಂದು ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಆಗಸ್ಟ್ 1 ರವರೆಗೆ ದರ್ಶನ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ ಡಿಕೆಶಿ ಎಂಟ್ರಿಯಿಂದ ದರ್ಶನ್ ಗೆ ರಿಲೀಫ್ ಸಿಗಬಹುದೇ ಎಂದು ಕಾದು ನೋಡಬೇಕಿದೆ.