ಬೆಂಗಳೂರು: ನಟ ದರ್ಶನ್ ಅವರನ್ನು ಜೈಲಿನಿಂದ ಹೊರತರುವಲ್ಲಿ ಪ್ರಮುಖ ಪಾತ್ರವಹಿಸಿದ ಪತ್ನಿ ವಿಜಯಲಕ್ಷ್ಮಿ ದೇವರ ಮೊರೆ ಹೋಗುತ್ತಲೇ ಇದ್ದಾರೆ. ಇಂದು ಅವರು ಮೆಜೆಸ್ಟಿಕ್‌ನ ಅಣ್ಣಮ್ಮ ದೇವಿಗೆ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು.
ನಟ ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾಗಿನಿಂದ ಗಂಡನ ಪ್ರತಿ ಹೆಜ್ಜೆಯಲ್ಲೂ ಜತೆಗಿದ್ದ ವಿಜಯಲಕ್ಷ್ಮಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇದ್ದಾರೆ. ದರ್ಶನ್ ಅವರನ್ನು ಜೈಲಿನಿಂದ ಬಿಡುಗಡೆಯಾಗುವ ದಿನಾನೂ ಬಳ್ಳಾರಿಯ ಫವರ್ ಫುಲ್ ದೇವಿಯ ದರ್ಶನವನ್ನು ವಿಜಯಲಕ್ಷ್ಮಿ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು.
ದರ್ಶನ್ ಅವರು ಆರೋಗ್ಯದಲ್ಲಿ ಚೇತರಿಸಿಕೊಂಡ ಬಳಿಕ ದಂಪತಿಗಳು ಸಮೇತ ಆರತಿ ಉಕ್ಕಡ ಮಾರಮ್ಮ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ್ದರು. ಅದಲ್ಲದೆ ದರ್ಶನ್ ಅವರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ದರ್ಶನ್ ಈಚೆಗೆ ಕುಟುಂಬ ಸಮೇತ ಕಾಸರಗೋಡಿನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.
ಒಟ್ಟಾರೆ ಕೊಲೆ ಪ್ರಕರಣದ ಬಳಿಕ ದರ್ಶನ್ ಹಾಗೂ ವಿಜಯಲಕ್ಷ್ಮಿ ದೇವರ ಮೊರೆ ಹೋಗುತ್ತಲೇ ಇದ್ದಾರೆ. ಇಂದು ವಿಜಯಲಕ್ಷ್ಮಿ ಮೆಜೆಸ್ಟಿಕ್‌ನ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳು ನಿಮ್ಮ ದಾಂಪತ್ಯದ ಮೇಲೆ ಯಾರಾ ಕಣ್ಣು ಬೀಳದಿರಲಿ ಎಂದು ಹಾರೈಸಿದ್ದಾರೆ.