Webdunia - Bharat's app for daily news and videos

Install App

ದರ್ಶನ್‌ ಬಿಡುಗಡೆಗಾಗಿ ಕಟ್ಟಿಕೊಂಡ ಹರಕೆಯನ್ನು ತೀರಿಸಿದ ವಿಜಯಲಕ್ಷ್ಮಿ: ಜಯ, ಸಂಪತ್ತು ಎಲ್ಲ ನಿಮ್ಮ ಹೆಸರಿನಲ್ಲಿದೆ ಎಂದ ಫ್ಯಾನ್ಸ್‌

Sampriya
ಶುಕ್ರವಾರ, 11 ಏಪ್ರಿಲ್ 2025 (15:59 IST)
Photo Courtesy X
ಬೆಂಗಳೂರು: ನಟ ದರ್ಶನ್ ಅವರನ್ನು ಜೈಲಿನಿಂದ ಹೊರತರುವಲ್ಲಿ ಪ್ರಮುಖ ಪಾತ್ರವಹಿಸಿದ ಪತ್ನಿ ವಿಜಯಲಕ್ಷ್ಮಿ ದೇವರ ಮೊರೆ ಹೋಗುತ್ತಲೇ ಇದ್ದಾರೆ. ಇಂದು ಅವರು ಮೆಜೆಸ್ಟಿಕ್‌ನ ಅಣ್ಣಮ್ಮ ದೇವಿಗೆ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು.

ನಟ ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾಗಿನಿಂದ ಗಂಡನ ಪ್ರತಿ ಹೆಜ್ಜೆಯಲ್ಲೂ ಜತೆಗಿದ್ದ ವಿಜಯಲಕ್ಷ್ಮಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇದ್ದಾರೆ. ದರ್ಶನ್ ಅವರನ್ನು ಜೈಲಿನಿಂದ ಬಿಡುಗಡೆಯಾಗುವ ದಿನಾನೂ ಬಳ್ಳಾರಿಯ ಫವರ್‌ ಫುಲ್ ದೇವಿಯ ದರ್ಶನವನ್ನು ವಿಜಯಲಕ್ಷ್ಮಿ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ‌‌

ದರ್ಶನ್ ಅವರು ಆರೋಗ್ಯದಲ್ಲಿ ಚೇತರಿಸಿಕೊಂಡ ಬಳಿಕ ದಂಪತಿಗಳು ಸಮೇತ ಆರತಿ ಉಕ್ಕಡ ಮಾರಮ್ಮ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ್ದರು. ಅದಲ್ಲದೆ ದರ್ಶನ್ ಅವರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.  ದರ್ಶನ್ ಈಚೆಗೆ ಕುಟುಂಬ ಸಮೇತ ಕಾಸರಗೋಡಿನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

ಒಟ್ಟಾರೆ ಕೊಲೆ ಪ್ರಕರಣದ ಬಳಿಕ ದರ್ಶನ್ ಹಾಗೂ ವಿಜಯಲಕ್ಷ್ಮಿ ದೇವರ ಮೊರೆ ಹೋಗುತ್ತಲೇ ಇದ್ದಾರೆ. ಇಂದು ವಿಜಯಲಕ್ಷ್ಮಿ ಮೆಜೆಸ್ಟಿಕ್‌ನ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳು ನಿಮ್ಮ ದಾಂಪತ್ಯದ ಮೇಲೆ ಯಾರಾ ಕಣ್ಣು ಬೀಳದಿರಲಿ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments