Webdunia - Bharat's app for daily news and videos

Install App

ಗಂಡ ದರ್ಶನ್ ರಕ್ಷಣೆಗೆ ನಟ ಧನ್ವೀರ್ ಜೊತೆ ವಿಜಯಲಕ್ಷ್ಮಿ ಹೋಗಿದ್ದೆಲ್ಲಿಗೆ: ಇಲ್ಲಿದೆ ವಿಡಿಯೋ

Krishnaveni K
ಬುಧವಾರ, 9 ಅಕ್ಟೋಬರ್ 2024 (12:54 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹಂತದಲ್ಲಿರುವಾಗ ಪತ್ನಿ ವಿಜಯಲಕ್ಷ್ಮಿ ಇಂದು ದೇವರ ಮೊರೆ ಹೋಗಿದ್ದಾರೆ. ಅವರಿಗೆ ನಟ ಧನ್ವೀರ್ ಕೂಡಾ ಸಾಥ್ ನೀಡಿದ್ದಾರೆ.

ವಿಜಯಲಕ್ಷ್ಮಿ ಪತಿಯ ಬಿಡುಗಡೆಗಾಗಿ ಹೆಣಗಾಡುತ್ತಿದ್ದರೆ ಅವರಿಗೆ ಸಾಥ್ ನೀಡುತ್ತಿರುವವರು ನಟ ಧನ್ವೀರ್ ಮತ್ತು ಬಾಮೈದ ದಿನಕರ್ ತೂಗುದೀಪ. ಇಂದೂ ಕೂಡಾ ದರ್ಶನ್ ಜಾಮೀನು ಅರ್ಜಿಯ ಪ್ರತಿವಾದ ಪ್ರಕ್ರಿಯೆ ಕೋರ್ಟ್ ನಲ್ಲಿ ನಡೆಯಲಿದೆ. ಎಸ್ ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸುತ್ತಿದ್ದಾರೆ.

ಇದೀಗ ಜಾಮೀನು ಅರ್ಜಿ ವಿಚಾರ ನಿರ್ಣಾಯಕ ಹಂತದಲ್ಲಿದ್ದು ವಿಜಯಲಕ್ಷ್ಮಿ ಪತಿಯ ಒಳಿತಿಗಾಗಿ ನಾಡದೇವತೆ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆಯೂ ಕಾಡುತ್ತಿದ್ದು, ಅದೇ ವಿಚಾರವನ್ನಿಟ್ಟುಕೊಂಡು ಜಾಮೀನು ಪಡೆಯಲು ದರ್ಶನ್ ಮುಂದಾಗಬಹುದು. ಒಟ್ಟಿನಲ್ಲಿ ಇದು ದರ್ಶನ್ ಗೆ ನಿರ್ಣಾಯಕ ಸಮಯ.

ಹೀಗಾಗಿಯೇ ಇಂದು ವಿಜಯಲಕ್ಷ್ಮಿ ದರ್ಶನ್ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಗಂಡನ ಬಿಡುಗಡೆಗಾಗಿ ಪ್ರಾರ್ಥನೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಬೆಂಗಾವಲಾಗಿ ಧನ್ವೀರ್ ಕೂಡಾ ಸಾಥ್ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments