ಬೆಂಗಳೂರು: ಸದ್ಯ ನಟ ದರ್ಶನ್ ಅವರು ತಮ್ಮ ಆರೋಗ್ಯದಲ್ಲಿ ಸುಧಾರಿಸಿಕೊಂಡು ಸಿನಿಮಾ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ 10ದಿನಗಳಿಂದ ದರ್ಶನ್ ಅವರು ಸಿನಿಮಾದ ಶೂಟಿಂಗ್‌ಗಾಗಿ ರಾಜಸ್ಥಾನಕ್ಕೆ ತೆರಳಿದ್ದಾರೆ. ಪತಿಗೆ ಸಾಥ್ ನೀಡಲು ಪತ್ನಿ ವಿಜಯಲಕ್ಷ್ಮಿ ಕೂಡಾ ರಾಜಸ್ಥಾನಕ್ಕೆ ತೆರಳಿದ್ದಾರೆ. ಇಲ್ಲಿನ ಸುಂದರ ದೃಶ್ಯಗಳನ್ನು ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
ಬಂಗಲೆಯ ಚಿತ್ತಾರವನ್ನು ಸೆರೆ ಹಿಡಿದ ವಿಜಯಲಕ್ಷ್ಮಿ, ಫೋಟೋಗೆ ಫೋಸ್ ನೀಡಿದ್ದಾರೆ. ಅವೆಲ್ಲವನ್ನೂ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಸ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ದರ್ಶನ್ ಅಭಿಮಾನಿಗಳು, ಕಮೆಂಟ್ ಮಾಡುತ್ತಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ದರ್ಶನ್ ಅವರು ಕೊಂಚ ಬ್ರೇಕ್ ಪಡೆದು ಇದೀಗ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ರಾಜಸ್ಥಾನದ ಉದಯಪುರದಲ್ಲಿ 'ಡೆವಿಲ್' ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ. ರಾಜಸ್ಥಾನ ಶೆಡ್ಯೂಲ್ ಚಿತ್ರೀಕರಣ ಮುಗಿಸಿ ಏ.4ರಂದು ಬೆಂಗಳೂರಿಗೆ ಪತ್ನಿಯೊಂದಿಗೆ ದರ್ಶನ್ ವಾಪಸ್ಸಾಗಲಿದ್ದಾರೆ ಎನ್ನಲಾಗಿದೆ.
ಈ ಸಿನಿಮಾನವನ್ನು ಮಿಲನಾ ಪ್ರಕಾಶ್ ಅವರು ನಿರ್ದೇಶನಾ ಮಾಡುತ್ತಿದ್ದಾರೆ. ದರ್ಶನ್‌ಗೆ ಜೋಡಿಯಾಗಿ ರಚನಾ ರೈ, ಶರ್ಮಿಳಾ ಮಾಂಡ್ರೆ ಅವರು ಅಭಿನಯಿಸಿದ್ದಾರೆ. ಇನ್ನೂ ಈ ಸಿನಿಮಾದಲ್ಲಿ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ ಅವರು ವಿಲನ್ ಆಗಿ ಅಬ್ಬರಿಸಲಿದ್ದಾರೆ.