ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಮೊದಲ ದಿನವೇ ಭರ್ಜರಿ ಗಳಿಕೆ ಮಾಡಿದೆ ಎನ್ನುತ್ತಿವೆ ಮಾರುಕಟ್ಟೆ ಮೂಲಗಳು.
ಅಡ್ವಾನ್ಸ್ ಬುಕಿಂಗ್ ಮೂಲಕವೇ ಚಿತ್ರ 6-7 ಕೋಟಿ ರೂ. ಬ್ಯುಸಿನೆಸ್ ಮಾಡಿತ್ತು. ಇದೀಗ ಮೊದಲ ದಿನದ ಗಳಿಕೆ 40 ಕೋಟಿ ರೂ.ಗೂ ಅಧಿಕ ಎನ್ನಲಾಗಿದೆ.
ವಿಕ್ರಾಂತ್ ರೋಣ 3 ಡಿ ವರ್ಷನ್ ಗೆ ಭಾರೀ ಬೇಡಿಕೆ ಬಂದಿದೆ. ಇದೀಗ ವೀಕೆಂಡ್ ಬೇರೆ ಇದ್ದು, ಚಿತ್ರದ ಗಳಿಕೆಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.