ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಡೇಟ್ ಮುಂದೂಡಿಕೆಯಾದ ಬಳಿಕ ಬೇಸರಗೊಂಡಿದ್ದ ಅಭಿಮಾನಿಗಳಿಗೆ ಹೊಸ ಅಪ್ ಡೇಟ್ ಸಿಕ್ಕಿದೆ.
ವಿಕ್ರಾಂತ್ ರೋಣ ಸಿನಿಮಾ ಫೆಬ್ರವರಿ 24 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿತ್ತು.
ಆದರೆ ಇನ್ನೀಗ ಬಾಲಿವುಡ್ ಸೇರಿದಂತೆ ಮಲ್ಟಿಪ್ಲೆಕ್ಸ್ ಗಳಲ್ಲಿ ಎಲ್ಲಾ ಭಾಷೆಗಳಲ್ಲಿ ವಿಕ್ರಾಂತ್ ರೋಣ ಟೀಸರ್ ಪ್ರಸಾರವಾಗಲಿದೆ. ಹೀಗಾಗಿ ಸದ್ಯದಲ್ಲೇ ರಿಲೀಸ್ ಡೇಟ್ ಕೂಡಾ ಘೋಷಣೆಯಾಗುವ ಸಾಧ‍್ಯತೆಯಿದೆ.