Publish Date: Mon, 28 Mar 2022 (09:00 IST)
Updated Date: Mon, 28 Mar 2022 (09:17 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡುತ್ತಲೇ ಇದ್ದಾರೆ. ಇದೀಗ ಚಿತ್ರತಂಡ ಹೊಸ ಅಪ್ ಡೇಟ್ ಕೊಡಲು ಮುಂದಾಗಿದೆ.
ಮಾರ್ಚ್ 29 ರಂದು ಚಿತ್ರದ ಬಗ್ಗೆ ಹೊಸ ಮಾಹಿತಿ ನೀಡುವುದಾಗಿ ಚಿತ್ರತಂಡ ಘೋಷಿಸಿದೆ. ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಲು ಚಿತ್ರತಂಡ ಉದ್ದೇಶಿಸಿದೆ ಎನ್ನಲಾಗಿದೆ.
ಬಹುಭಾಷೆಗಳಲ್ಲಿ 3 ಡಿಯಲ್ಲಿ ಮೂಡಿಬರಲಿರುವ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲವಿದೆ. ಹೀಗಾಗಿ ಅವರ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಹೊರತರಲು ಚಿತ್ರತಂಡ ತಯಾರಿ ನಡೆಸುತ್ತಿದೆ. ಬಹುಶಃ ಮೇ ಅಂತ್ಯಕ್ಕೆ ಚಿತ್ರ ತೆರೆಗೆ ಬರುವ ನಿರೀಕ್ಷೆಯಿದೆ.