ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಗೂ ಮುನ್ನವೇ ಭರ್ಜರಿ ಸುದ್ದಿ ಮಾಡಿದೆ.
ಈ ಸಿನಿಮಾದ ಸಾಗರೋತ್ತರ ಡಬ್ಬಿಂಗ್ ರೈಟ್ಸ್ ಬರೋಬ್ಬರಿ 10 ಕೋಟಿ ರೂ.ಗೆ ಸೇಲ್ ಆಗಿದೆ. ಒನ್ ಟ್ವೆಂಟಿ 8 ಮೀಡಿಯಾ ರೈಟ್ಸ್ ಖರೀದಿ ಮಾಡಿದೆ.
ಕೆಜಿಎಫ್ 2 ಬಳಿಕ ಕನ್ನಡ ಸಿನಿಮಾಗಳಿಗೆ ಉತ್ತಮ ಬೇಡಿಕೆಯಿದೆ. ಹೀಗಾಗಿ ವಿಕ್ರಾಂತ್ ರೋಣಗೂ ಭರ್ಜರಿ ಹೈಪ್ ಕ್ರಿಯೇಟ್ ಆಗಿದೆ. ಚಿತ್ರ ಜುಲೈ 28 ರಂದು ಬಿಡುಗಡೆಯಾಗಲಿದೆ.