ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿದೆ.
ವಿಕ್ರಾಂತ್ ರೋಣ ಸಿನಿಮಾ ಫೆಬ್ರವರಿ 24 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಕೊರೋನಾ ನಿರ್ಬಂಧದಿಂದಾಗಿ ಚಿತ್ರ ಬಿಡುಗಡೆ ಮುಂದೂಡಲಾಗಿದೆ.
ಕೊರೋನಾ ನಿರ್ಬಂಧದಿಂದಾಗಿ ಪ್ರಸ್ತುತ ಪ್ರಪಂಚದಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಸಾಧ‍್ಯವಾಗುತ್ತಿಲ್ಲ. ಹೊಸ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ಚಿತ್ರತಂಡ ಹೇಳಿದೆ.