Publish Date: Mon, 16 May 2022 (08:59 IST)
Updated Date: Mon, 16 May 2022 (09:03 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಬಗ್ಗೆ ಮಹತ್ವದ ಅಪ್ ಡೇಟ್ ಕೊಡುವುದಾಗಿ ಈಗಾಗಲೇ ಚಿತ್ರತಂಡ ಘೋಷಿಸಿದೆ.
ಇಂದು ಸಂಜೆ 5.05 ಕ್ಕೆ ಚಿತ್ರದ ಬಗ್ಗೆ ವಿಶೇಷ ಮಾಹಿತಿ ನೀಡುವುದಾಗಿ ಚಿತ್ರತಂಡ ಹೇಳಿದೆ. ಹೀಗಾಗಿ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ ಮೊದಲ ಹಾಡಿನ ಬಿಡುಗಡೆ ದಿನಾಂಕ ಬಹಿರಂಗವಾಗಲಿದೆ ಎನ್ನಲಾಗಿದೆ.
ಜುಲೈ 28 ಕ್ಕೆ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಇದಕ್ಕೂ ಮೊದಲು ಅಭಿಮಾನಿಗಳಿಗೆ ಒಂದೊಂದೇ ಅಪ್ ಡೇಟ್ ಕೊಡಲು ಚಿತ್ರತಂಡ ತಯಾರಾಗಿದೆ.