Publish Date: Sat, 17 Jul 2021 (09:20 IST)
Updated Date: Sat, 17 Jul 2021 (09:27 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ತಂಡದ ಕಡೆಯಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.
ಈ ಸಿನಿಮಾದ ಹಾಡಿನ ಚಿತ್ರೀಕರಣವೊಂದು ಬೆಂಗಳೂರಿನಲ್ಲಿ ವಿಶೇಷ ಸೆಟ್ ನಲ್ಲಿ ನಡೆದಿತ್ತು. ಈ ಹಾಡಿನ ಚಿತ್ರೀಕರಣದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡಾ ಹೆಜ್ಜೆ ಹಾಕಿದ್ದರು. ಆ ಚಿತ್ರೀಕರಣವೀಗ ಮುಕ್ತಾಯವಾಗಿದೆ. ಇದರೊಂದಿಗೆ ವಿಕ್ರಾಂತ್ ರೋಣ ಶೂಟಿಂಗ್ ಮುಕ್ತಾಯವಾಗಿದೆ.
ಈಗಾಗಲೇ ವಿಕ್ರಾಂತ್ ರೋಣ ಡಬ್ಬಿಂಗ್ ಕೆಲಸಗಳೂ ಭರದಿಂದ ಸಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ ತೊಡಗಿಸಿಕೊಂಡಿದೆ. ಹೀಗಾಗಿ ಸದ್ಯದಲ್ಲೇ ವಿಕ್ರಾಂತ್ ರೋಣ ರಿಲೀಸ್ ಬಗ್ಗೆ ಅಭಿಮಾನಿಗಳಿಗೆ ಅಧಿಕೃತ ಮಾಹಿತಿ ದೊರೆಯುವುದು ಪಕ್ಕಾ ಆಗಿದೆ.