Publish Date: Thu, 23 Jun 2022 (08:10 IST)
Updated Date: Thu, 23 Jun 2022 (08:48 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಟ್ರೈಲರ್ ಇಂದು ಬಿಡುಗಡೆಯಾಗಲಿದೆ.
ಈ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು ಭಾರೀ ನಿರೀಕ್ಷೆ ಹುಟ್ಟಿಸಿದೆ. 3 ಡಿ ಅವತಾರದಲ್ಲಿ ವಿಕ್ರಾಂತ್ ರೋಣ ಜುಲೈ 28 ರಿಂದ ಥಿಯೇಟರ್ ಗೆ ಬರಲಿದ್ದಾನೆ.
ಇಂದು ಸಂಜೆ 5.02 ಕ್ಕೆ ಹಿಂದಿ, ಕನ್ನಡ, ಇಂಗ್ಲಿಷ್, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟ್ರೈಲರ್ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ನಟ ಧನುಷ್, ಹಿಂದಿಯಲ್ಲಿ ಸಲ್ಮಾನ್ ಖಾನ್ ಟ್ರೈಲರ್ ಲಾಂಚ್ ಮಾಡಲಿದ್ದಾರೆ.