ದರ್ಶನ್ ಮಾತ್ರವಲ್ಲ, ರೇಣುಕಾಸ್ವಾಮಿ ಕುಟುಂಬಕ್ಕೂ ಸಹಾಯಕ್ಕೆ ಮುಂದಾದ ವಿನೋದ್ ರಾಜ್

Krishnaveni K
ಶುಕ್ರವಾರ, 26 ಜುಲೈ 2024 (11:04 IST)
Photo Credit: Instagram
ಬೆಂಗಳೂರು: ದರ್ಶನ್ ಆಂಡ್ ಗ್ಯಾಂಗ್ ನಿಂದ ಹತ್ಯೆಗೀಡಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕುಟುಂಬಸ್ಥರನ್ನು ನಟ ವಿನೋದ್ ರಾಜ್ ಭೇಟಿ ಮಾಡಲು ಹೊಟರಿದ್ದಾರೆ. ಈ ಮೂಲಕ ರೇಣುಕಾಸ್ವಾಮಿ ಕುಟುಂಬಕ್ಕೆ ತಮ್ಮ ಕೈಲಾದ ಸಹಾಯ ಮಾಡಲಿದ್ದಾರೆ.

ಮೊನ್ನೆಯಷ್ಟೇ ವಿನೋದ್ ರಾಜ್ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ನಟ ದರ್ಶನ್ ರನ್ನು ಭೇಟಿ ಮಾಡಿ ಬಂದಿದ್ದರು. ಅದಾದ ಬಳಿಕ ದರ್ಶನ್ ರನ್ನು ಯಾವತ್ತೂ ಕೈ ಬಿಡಬೇಡ ಎಂದು ಅಮ್ಮ (ಹಿರಿಯ ನಟಿ ಲೀಲಾವತಿ) ಹೇಳಿದ್ದರು ಎಂದು ಕಣ್ಣೀರು ಹಾಕಿದ್ದರು. ಇದನ್ನು ನೋಡಿ ನೆಟ್ಟಿಗರು ಮೊದಲು ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿ ಎಂದಿದ್ದರು.

ಅದರಂತೆ ಈಗ ವಿನೋದ್ ರಾಜ್ ಚಿತ್ರದುರ್ಗಕ್ಕೆ ತೆರಳಿ ರೇಣುಕಾಸ್ವಾಮಿ ಪೋಷಕರು, ಪತ್ನಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಹೊರಟಿದ್ದಾರೆ. ಬರೀ ಅಷ್ಟೇ ಅಲ್ಲದೇ 1 ಲಕ್ಷ ರೂ. ಹಣವನ್ನೂ ಸಹಾಯದ ರೂಪದಲ್ಲಿ ನೀಡಲಿದ್ದಾರೆ. ಇದಕ್ಕಾಗಿ ಇಂದು ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಹೊರಟಿದ್ದಾರೆ.

ಈಗಾಗಲೇ ಚಲನಚಿತ್ರ ವಾಣಿಜ್ಯ ಮಂಡಳಿ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಧನ ನೀಡಿತ್ತು. ಹಲವಾರು ಸಂಘ-ಸಂಸ್ಥೆಗಳೂ ನೆರವಾಗಿದ್ದರು. ಕುಟುಂಬಕ್ಕೆ ಆರ್ಥಿಕವಾಗಿ ಏಕೈಕ ಆಧಾರವಾಗಿದ್ದ ರೇಣುಕಾಸ್ವಾಮಿಯನ್ನು ಕಳೆದುಕೊಂಡಿದ್ದರಿಂದ ಅವರ ಪತ್ನಿಗೆ ಸರ್ಕಾರೀ ನೌಕರಿ ಕೊಡಿ ಎಂದು ಈಗಾಗಲೇ ಅವರ ತಂದೆ ಕಾಶೀನಾಥಯ್ಯ ಸರ್ಕಾರಕ್ಕೆ ಮೊರೆಯಿಡುತ್ತಿದ್ದಾರೆ. ಇದಕ್ಕೆ ಟೀಕೆಗಳೂ ಕೇಳಿಬಂದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments