Publish Date: Sat, 03 Feb 2018 (06:26 IST)
Updated Date: Sat, 03 Feb 2018 (06:31 IST)
ಬೆಂಗಳೂರು : ಸ್ಯಾಂಡಲ್‍ವುಡ್ ನಟರಾದ ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಉಪೇಂದ್ರ ಸೇರಿದಂತೆ ಅನೇಕ ನಟರು ರಾಜಕೀಯಕ್ಕೆ ಸಂಬಂಧಪಟ್ಟಂತೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಇದೀಗ ಸ್ಯಾಂಡಲ್‍ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರು ರಾಜಕೀಯಕ್ಕೆ ಬರುವುದರ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ರಾಜಕೀಯ ಪಕ್ಷದವರು ಸಿನಿಮಾ ನಟ-ನಟಿಯರನ್ನ ಮುಂದಿಟ್ಟುಕೊಂಡು ಪ್ರಚಾರ ನಡಿಸಲು ಮುಂದಾಗಿದ್ದು, ಈ ಬಗ್ಗೆ ಯಶ್ ಅವರನ್ನು ಕೇಳಿದಾಗ ಅವರು,’ ವಿಧಾನಸಭೆಗೆ ಅತ್ಯುತ್ತಮ ಜನಪ್ರತಿನಿಧಿಗಳು ಆಯ್ಕೆಯಾಗಬೇಕೆಂಬ ಆಸೆ ನನಗಿದೆ. ಆದರೆ ನಾನೇ ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲಾರೆ. ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಲಾರೆ. ರಾಜಕೀಯಕ್ಕೆ ಬರುವಂತೆ ಅನೇಕರು ನನ್ನನ್ನು ಒತ್ತಾಯ ಮಾಡುತ್ತಿರುವುದು ನಿಜ. ಆದರೆ ಸದ್ಯಕ್ಕೆ ನಾನು ಅಂಥ ಯಾವುದೇ ಯೋಚನೆ ಹೊಂದಿಲ್ಲ. ನಟನಾಗಿದ್ದುಕೊಂಡೇ ಜನರಿಗಾಗಿ ಕೆಲಸ ಮಾಡುವ ಉದ್ದೇಶವನ್ನು ಹೊಂದಿದ್ದೇನೆ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ