Webdunia - Bharat's app for daily news and videos

Install App

ರಾಜಕೀಯಕ್ಕೆ ಬರುವುದರ ಬಗ್ಗೆ ನಟ ಶಿವರಾಜ್ ಕುಮಾರ್ ಹೇಳಿದ್ದೇನು...?

Webdunia
ಮಂಗಳವಾರ, 27 ಮಾರ್ಚ್ 2018 (07:08 IST)
ದಾವಣಗೆರೆ : ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯ ಅಖಾಡಕ್ಕೆ ಇಳಿಯುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ಈ ನಡುವೆ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ರಾಜಕೀಯದಲ್ಲಿ ತೊಡಗಿದ್ದು, ಅದೇರೀತಿ ಶಿವರಾಜ್ ಕುಮಾರ್ ಅವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಆದರೆ ಈ ಬಗ್ಗೆ ಶಿವರಾಜ್ ಕುಮಾರ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.


ಟಗರು ಸಿನಿಮಾದ ವಿಜಯೋತ್ಸವದಲ್ಲಿ ಭಾಗಿಯಾದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು,’ ನಾನು ರಾಜಕೀಯಕ್ಕೆ ಬರೋದಿಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನನ್ನ ಪತ್ನಿ ಗೀತಾ ಶಿವರಾಜ್‍ಕುಮಾರ್ ಮಾತ್ರ ರಾಜಕೀಯದಲ್ಲಿ ಇರುತ್ತಾರೆ ಎಂದು ಶಿವರಾಜ್‍ಕುಮಾರ್ ಸ್ಪಷ್ಟನೆ ನೀಡಿದ್ದಾರೆ.


‘ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ನಾನು ಸ್ವಾಗತ ಮಾಡುತ್ತೇನೆ. ಉಪೇಂದ್ರ ಯಾವಾಗಲೂ ಸಮಾಜದಲ್ಲಿ ಬದಲಾವಣೆ ತರಬೇಕು ಎಂಬುದರ ಬಗ್ಗೆ ಚಿಂತಿಸುತ್ತಿರುತ್ತಾರೆ. ನಾನು ಯಾವಾಗಲೂ ಉಪೇಂದ್ರ ಅವರಿಗೆ ಬೆಂಬಲ ನೀಡುತ್ತೇನೆ ‘ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments