Publish Date: Sun, 04 Feb 2018 (06:38 IST)
Updated Date: Sun, 04 Feb 2018 (06:45 IST)
ಬೆಂಗಳೂರು : ಫೆಬ್ರವರಿ 16 ರಂದು 41 ನೇ ವಸಂತಕ್ಕೆ ಕಾಲಿಡಲಿರುವ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಹುಟ್ಟುಹಬ್ಬಕ್ಕೆ ಬರುವ ಅಭಿಮಾನಿಗಳಿಗೆ ಟ್ವೀಟ್ ಮೂಲಕ ಮನವಿಯೊಂದನ್ನು ಮಾಡಿದ್ದಾರೆ.
ಪ್ರತಿ ವರ್ಷವೂ ದರ್ಶನ್ ಅವರ ಹುಟ್ಟುಹಬ್ಬವನ್ನು ಆಚರಿಸಲು ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳ ಮಹಾಪೂರವೇ ಹರಿದುಬರುತ್ತಿದ್ದು, ದರ್ಶನ್ ಅವರನ್ನು ಕಾಣಲು ಹರಸಾಹಸ ಮಾಡುತ್ತಿದ್ದರು. ಆದ್ದರಿಂದ ಈ ಬಾರಿ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಈ ವೇಳೆ ಹೆಚ್ಚಿನ ಜನಸಂಖ್ಯೆಯಲ್ಲಿ ಬರುವ ಅಭಿಮಾನಿಗಳು ತನ್ನನ್ನು ಕಾಣಲು ಮನೆಯ ಕಾಂಪೌಂಡ್ ಗೋಡೆ ಹತ್ತಿ ಸಾಹಸ ಮಾಡುತ್ತಾರೆ. ಇದರಿಂದ ತಮ್ಮ ನೆರೆಮನೆಯವರಿಗೆ ತೊಂದರೆ ಆಗುತ್ತಿದೆ. ಅಲ್ಲದೇ ಅಭಿಮಾನಿಗಳ ಜೀವಕ್ಕೂ ಹಾನಿಯಾಗುವ ಸಂಭವ ಹೆಚ್ಚಿದೆ.
ಆದ್ದರಿಂದ ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಬರುವ ಅಭಿಮಾನಿಗಳಿಗೆ ಶಾಂತಿ ಹಾಗೂ ಶಿಸ್ತಿನಿಂದ ಇರುವಂತೆ ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ. ತನ್ನ ಈ ಕೋರಿಕೆಯನ್ನು ನಡೆಸಿಕೊಡುತ್ತಿರಿ ಎಂದು ನಂಬಿರುದಾಗಿ ಹಾಗೂ ಸಂಘದ ಕಾರ್ಯಕರ್ತರಿಗೆ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕಾಗಿ ವಿನಂತಿ ಕೂಡ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ