ಚೆನ್ನೈ : ನಟ, ರಾಜಕಾರಣಿ ಕಮಲ್ ಹಾಸನ್ ಅವರು ಇಂದು ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅದು ಯಶಸ್ವಿಯಾಗಿ ಮುಗಿದಿದೆ ಎಂಬುದಾಗಿ ತಿಳಿದುಬಂದಿದೆ.
ನಟ ಕಮಲ್ ಹಾಸನ್ ಕಾಲು ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರ ಕಾಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂಬುದಾಗಿ ತಿಳಿದುಬಂದಿದೆ.
ಈ ಬಗ್ಗೆ ಅವರ ಮಗಳು ನಟಿ ಶ್ರುತಿ ಹಾಸನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಅವರು ಆರೋಗ್ಯವಾಗಿದ್ದು, ನಾಲ್ಕೈದು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.