ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಕೋರ್ಟ್ ನಲ್ಲಿ ಅವರ ಜಾಮೀನು ಅರ್ಜಿಯ ಕತೆ ಏನಾಯ್ತು ಇಲ್ಲಿದೆ ವಿವರ.
ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಕೆಲವು ಆರೋಪಿಗಳೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಜೈಲು ವಾಸ ಅನುಭವಿಸಿ ಬರೋಬ್ಬರಿ 100 ದಿನಗಳ ಬಳಿಕ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಇಂದು ಅರ್ಜಿಯ ಮೊದಲ ವಿಚಾರಣೆ ನಡೆದಿದೆ. ಆದರೆ ಸದ್ಯಕ್ಕೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆ.27 ಕ್ಕೆ ಮುಂದೂಡಲಾಗಿದೆ.
ಇನ್ನೊಂದೆಡೆ ಪವಿತ್ರಾ ಗೌಡ ಕೂಡಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಸೆ.25 ಕ್ಕೆ ಮುಂದೂಡಿಕೆ ಮಾಡಲಾಗಿದೆ. ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಕೋರ್ಟ್ ಎಸ್ ಪಿಪಿ ಪ್ರಸನ್ನಕುಮಾರ್ ಗೆ ಆಕ್ಷೇಪಣೆ ಸಲ್ಲಿಸಲು ಕೋರಿತ್ತು. ಆದರೆ ತಮಗೆ ಆಕ್ಷೇಪಣೆ ಸಲ್ಲಿಸಲು ಸಮಯ ಬೇಕೆಂದು ಪ್ರಸನ್ನಕುಮಾರ್ ಕೇಳಿದ್ದರಿಂದ ವಿಚಾರಣೆ ಮುಂದೂಡಲಾಗಿದೆ.
ಎರಡು ವಾರದ ಹಿಂದಷ್ಟೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಅದನ್ನು ಕೋರ್ಟ್ ಕೂಡಾ ಮಾನ್ಯ ಮಾಡಿತ್ತು. ಇದರ ಬೆನ್ನಲ್ಲೇ ದರ್ಶನ್ ಮತ್ತು ಪವಿತ್ರಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈಗ ವಿಚಾರಣೆ ಮುಂದೂಡಿಕೆಯಾಗಿರುವುದರಿಂದ ಮತ್ತಷ್ಟು ದಿನ ಆರೋಪಿಗಳಿಗೆ ಜೈಲೇ ಗತಿಯಾಗಿದೆ.