Publish Date: Wed, 28 Aug 2024 (09:25 IST)
Updated Date: Wed, 28 Aug 2024 (09:28 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದಕ್ಕೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿರುವ ನಟ ದರ್ಶನ್ ಎಷ್ಟು ಗಂಟೆಗೆ ಶಿಫ್ಟ್ ಆಗಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ನಟ ದರ್ಶನ್ ಮತ್ತು ಸಹಚರರನ್ನು ಈಗ ಬೇರೆ ಬೇರೆ ಜೈಲಿಗೆ ವರ್ಗಾಯಿಸಲು ಕೋರ್ಟ್ ಆದೇಶ ನೀಡಿದೆ. ಆದರೆ ಇದಕ್ಕೆ ಮೊದಲು ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿದೆ. ಹಿಗಾಗಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕವೇ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಗೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆಯಿದೆ. ಕೋರ್ಟ್ ಎಲ್ಲಾ ಸದಸ್ಯರನ್ನೂ ಬೇರೆ ಬೇರೆ ಗ್ಯಾಂಗ್ ಗೆ ವರ್ಗಾಯಿಸಲು ಆದೇಶ ನೀಡಿದೆ. ದರ್ಶನ್ ಮಾತ್ರ ಬಳ್ಳಾರಿಗೆ ಶಿಫ್ಟ್ ಆಗಲಿದ್ದಾರೆ. ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಅನುಕುಮಾರ್, ದೀಪಕ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ಪವನ್, ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ, ಜಗದೀಶ್, ಲಕ್ಷ್ಮಣ್ ಶಿವಮೊಗ್ಗ ಜೈಲು, ಧನರಾಜ್ ಧಾರವಾಡ, ವಿನಯ್ ವಿಜಯಪುರ, ಪ್ರದೂಶ್ ಬೆಳಗಾವಿ, ನಾಗರಾಜ್ ಕಲಬುರಗಿ ಜೈಲಿಗೆ ವರ್ಗಾವಣೆಯಾಗಲಿದ್ದಾರೆ.
ನ್ಯಾಯಾಲಯ ಇಂದೂ ಕೂಡಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸುವ ಸಾಧ್ಯತೆಯಿದೆ. ಇದರಿಂದಾಗಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಕಳೆಯುವುದು ಬಹುತೇಕ ನಿಶ್ಚಿತವಾಗಿದೆ. ಅಲ್ಲದೆ ಅವರ ವಿರುದ್ಧ ಈಗ ಹೊಸದಾಗಿ ಎರಡು ಪ್ರಕರಣ ದಾಖಲಾಗಿದ್ದು, ಅದರ ವಿಚಾರಣೆಯೂ ನಡೆಯಲಿದೆ.