Publish Date: Fri, 04 May 2018 (06:36 IST)
Updated Date: Fri, 04 May 2018 (06:38 IST)
ಬೆಂಗಳೂರು : ಸ್ಯಾಂಡಲ್ ವುಡ್ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರು ಜೊತೆಯಾಗಿ ನಟಿಸುತ್ತಿರುವ ಬಹುನಿರೀಕ್ಷೆಯ ‘ದಿ ವಿಲನ್’ ಸಿನಿಮಾವನ್ನು ವೀಕ್ಷಿಸಲು ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳಿಗೊಂದು ಸಂತಸದ ವಿಷಯವೆನೆಂದರೆ ಈ ಸಿನಿಮಾ ರಿಲೀಸ್ ಮಾಡಲು ದಿನ ನಿಗದಿಯಾಗಿದೆ.
ಹೌದು. ಸುದೀಪ್ ಮತ್ತು ಶಿವರಾಜ್ ಕುಮಾರ್ ಅವರ ಒಂದೊಂದು ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ. ಈಗಾಗಲೇ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿದ್ದು, ಸಾಂಗ್ ಶೂಟಿಂಗ್ ಪೂರ್ಣಗೊಳಿಸಿ ಟೀಸರ್ ಬಿಡುಗಡೆಗೆ ಪ್ಲಾನ್ ಮಾಡಲಾಗಿದೆ. ಹಾಗೇ ಬಾಕಿ ಉಳಿದ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಿ ಆಗಸ್ಟ್ ತಿಂಗಳಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ 'ದಿ ವಿಲನ್' ರಿಲೀಸ್ ಮಾಡಲು ನಿರ್ದೇಶಕ ಪ್ರೇಮ್ ನಿರ್ಧರಿಸಿದ್ದಾರಂತೆ.
ಜೋಗಿ ಪ್ರೇಮ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರವನ್ನು ಸಿ.ಆರ್. ಮನೋಹರ್ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್, ಸುದೀಪ್, ಆಮಿ ಜಾಕ್ಸನ್, ಮಿಥುನ್ ಚಕ್ರವರ್ತಿ, ಶ್ರೀಕಾಂತ್ ಸೇರಿ ಹಲವರು ನಟಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ