Publish Date: Tue, 30 May 2017 (14:56 IST)
Updated Date: Tue, 30 May 2017 (20:36 IST)
ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಭೇಟಿ ಮಾಡಿ ತಮ್ಮ ಸಂತಸವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೇವಾಚ್ ಶೂಟಿಂಗ್‌ಗಾಗಿ ಜರ್ಮನಿಯ ಬರ್ಲಿನ್‌ನಲ್ಲಿರುವ 34 ವರ್ಷ ವಯಸ್ಸಿನ ಬಾಲಿವುಡ್ ಹಾಟ್ ನಟಿ ಪ್ರಿಯಾಂಕಾ ಚೋಪ್ರಾ, ಪ್ರಧಾನಿ ಮೋದಿ ನಗರಕ್ಕೆ ಆಗಮಿಸಿರುವ ಸುದ್ದಿ ತಿಳಿದು ಅವರಿದ್ದಲ್ಲಿಗೆ ತೆರಳಿ ಭೇಟಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ನನ್ನನ್ನು ಭೇಟಿಯಾಗಲು ಸಮಯ ನೀಡಿದ್ದಕ್ಕೆ ಧನ್ಯವಾದಗಳು ನರೇಂದ್ರ ಮೋದಿ ಸರ್ ಎನ್ನುವ ಕ್ಯಾಪ್ಶನ್‌ನೊಂದಿಗೆ ಟ್ವಿಟ್ಟರ್‌ನಲ್ಲಿ ಸುಂದರವಾದ ಫೋಟೋ ಹಾಕಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆರು ದಿನಗಳ ಪ್ರವಾಸದಲ್ಲಿ ಜರ್ಮನಿ, ಸ್ಪೇನ್, ರಷ್ಯಾ ಮತ್ತು ಫ್ರಾನ್ಸ್ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಇದೀಗ ಮೋದಿ ಮೊದಲು ಜರ್ಮನಿಗೆ ಭೇಟಿ ನೀಡಿದ್ದಾರೆ.
ದ್ವಿಪಕ್ಷೀಯ ಆರ್ಥಿಕ ಒಪ್ಪಂದಗಳಿಗೆ ಸಹಿಹಾಕುವುದರೊಂದಿಗೆ ವಿದೇಶಿ ಬಂಡವಾಳವನ್ನು ಆಕರ್ಷಿಸುವ ಗುರಿಯನ್ನು ಪ್ರಧಾನಿ ಮೋದಿ ಹೊಂದಿದ್ದಾರೆ ಎಂದು ಪ್ರದಾನಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.