ಬೆಂಗಳೂರು: ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾದ ಪ್ರೀಮಿಯರ್ ಶೋ ಯಾವಾಗ ಎಂಬ ಪ್ರಶ್ನೆಗೆ ರಿಷಬ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉತ್ತರ ನೀಡಿದ್ದಾರೆ.
ಕಾಂತಾರ ಚಾಪ್ಟರ್ 1 ಸಿನಿಮಾದ ಟ್ರೈಲರ್ ನಿನ್ನೆ ರಿಲೀಸ್ ಆಗಿದೆ. ಟ್ರೈಲರ್ ಲಾಂಚ್ ಪತ್ರಿಕಾಗೋಷ್ಠಿಯಲ್ಲಿ ರಿಷಬ್ ಶೆಟ್ಟಿ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ಈ ವೇಳೆ ಅವರಿಗೆ ಪ್ರೀಮಿಯರ್ ಶೋ ಯಾವಾಗ ಎಂಬ ಪ್ರಶ್ನೆ ಬಂದಿದೆ.
ಇದಕ್ಕೆ ಉತ್ತರಿಸಿರುವ ಅವರು ಖಂಡಿತಾ ಮಾಡ್ತೀವಿ. ಅಕ್ಟೋಬರ್ 1 ಕ್ಕೆ ಪ್ರೀಮಿಯರ್ ಶೋ ನಡೆಯಲಿದೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯದಲ್ಲೇ ನೀಡುತ್ತೇವೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ಸದ್ಯಕ್ಕೆ ರಿಷಬ್ ಶೆಟ್ಟಿ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿಯಾಗಲಿದ್ದಾರೆ. ಇದಕ್ಕೆ ಮೊದಲು ಕೆಲವು ಹಾಡುಗಳನ್ನು ಬಿಡುಗಡೆ ಮಾಡಬಹುದು ಎಂದೂ ಅವರು ಹೇಳಿದ್ದಾರೆ. 27 ರಿಂದ ಎರಡು ದಿನಗಳ ಕಾಲ ಅವರು ಕೊಚ್ಚಿ, ಚೆನ್ನೈ, ಹೈದರಾಬಾದ್ ಮತ್ತು ನಾರ್ತ್ ಇಂಡಿಯಾದಲ್ಲಿ ಪ್ರಮೋಷನ್ ಮಾಡಲಿದ್ದಾರೆ ಎಂದು ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದಾರೆ.