Select Your Language

Notifications

webdunia
webdunia
webdunia
webdunia

ಪುನೀತ್ ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ಪ್ರವೇಶ ಯಾವಾಗ?

ಪುನೀತ್ ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ಪ್ರವೇಶ ಯಾವಾಗ?
ಬೆಂಗಳೂರು , ಮಂಗಳವಾರ, 2 ನವೆಂಬರ್ 2021 (07:41 IST)
ಬೆಳ್ಳಿತೆರೆ ಮೇಲೆ ಪ್ರಕಾಶಮಾನವಾಗಿ ಮಿನುಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಈಗ ಮಣ್ಣಲ್ಲಿ ಮಣ್ಣಾಗಿದ್ದಾರೆ.
ತಂದೆ ಡಾ.ರಾಜ್ಕುಮಾರ್, ತಾಯಿ ಪಾರ್ವತಮ್ಮ ರಾಜ್ಕುಮಾರ್ ಅವರ ಪಕ್ಕದಲ್ಲೇ ಪುನೀತ್ ರಾಜ್ಕುಮಾರ್ ಭೂಮಿ ತಾಯಿಯ ಒಡಲು ಸೇರಿದ್ದಾರೆ. ತೀವ್ರ ಹೃದಯಾಘಾತ ಹಾಗೂ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ, ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಪುನೀತ್ ರಾಜ್ಕುಮಾರ್ ಅವರ ಅಂತ್ಯಸಂಸ್ಕಾರ ಜರುಗಿತು.
ಹಾಲು ತುಪ್ಪ ಕಾರ್ಯ ಮಂಗಳವಾರ ನಡೆಯಲಿದೆ.ಸದ್ಯಕ್ಕೆ ಕಂಠೀರವ ಸ್ಟುಡಿಯೋದ ಆವರಣದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಹಾಲು ತುಪ್ಪ ಕಾರ್ಯ ನೆರವೇರಿಸುವವರೆಗೆ ಕಂಠೀರವ ಸ್ಟುಡಿಯೋದ ಒಳಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಹಾಲು ತುಪ್ಪ ಕಾರ್ಯದ ಬಳಿಕ ಪುನೀತ್ ರಾಜ್ಕುಮಾರ್ ಅವರ ಪುಣ್ಯಭೂಮಿಯ ದರ್ಶನಕ್ಕೆ ಸಾರ್ವಜನಿಕರಿಗೂ ಅವಕಾಶ ನೀಡುವ ಸಾಧ್ಯತೆ ಇದೆ.
ಪುನೀತ್ ರಾಜ್ಕುಮಾರ್ ಅವರ ಪುಣ್ಯಭೂಮಿಗೆ ನಮಸ್ಕರಿಸಲು ರಾಜ್ಯದ ಮೂಲೆ ಮೂಲೆಗಳಿಂದಲೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಆದರೆ, ಹಾಲು ತುಪ್ಪ ಕಾರ್ಯ ಮುಗಿಯುವವರೆಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ಪು ಅರ್ಧಕ್ಕೆ ಬಿಟ್ಟ ಚಿತ್ರಗಳ ಬಗ್ಗೆ ಶಿವಣ್ಣನ ಮಾತು