ಬೆಳ್ಳಿತೆರೆ ಮೇಲೆ ಪ್ರಕಾಶಮಾನವಾಗಿ ಮಿನುಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಈಗ ಮಣ್ಣಲ್ಲಿ ಮಣ್ಣಾಗಿದ್ದಾರೆ.ತಂದೆ ಡಾ.ರಾಜ್ಕುಮಾರ್, ತಾಯಿ ಪಾರ್ವತಮ್ಮ ರಾಜ್ಕುಮಾರ್ ಅವರ ಪಕ್ಕದಲ್ಲೇ ಪುನೀತ್ ರಾಜ್ಕುಮಾರ್ ಭೂಮಿ ತಾಯಿಯ ಒಡಲು ಸೇರಿದ್ದಾರೆ. ತೀವ್ರ ಹೃದಯಾಘಾತ ಹಾಗೂ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ, ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಪುನೀತ್ ರಾಜ್ಕುಮಾರ್ ಅವರ ಅಂತ್ಯಸಂಸ್ಕಾರ ಜರುಗಿತು.