Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ರಿಯಾಲಿಟಿ ಶೋನ ಸ್ಪರ್ಧಿ, ನಿರೂಪಕ ರೆಹಮಾನ್ ವ್ಯಕ್ತಿಯೊಬ್ಬನ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಗೆ ದೂರು ದಾಖಲಿಸಿದ್ದು ಯಾಕೆ…?

webdunia
ಬೆಂಗಳೂರು , ಗುರುವಾರ, 22 ಮಾರ್ಚ್ 2018 (06:03 IST)
ಬೆಂಗಳೂರು : ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಶೋನ ಸ್ಪರ್ಧಿ, ನಿರೂಪಕ ರೆಹಮಾನ್ ಅವರು ತಮಗೆ  ಅವಹೇಳನ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.


ಖಾಸಗಿ ಸುದ್ದಿ ಮಾಧ್ಯಮವೊಂದರಲ್ಲಿ ನಿರೂಪಕರಾಗಿದ್ದ ರೆಹಮಾನ್ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಜನರಿಗೆ ಚಿರಪರಿಚಿತರಾದರು. ನಂತರ ಇವರು ಕೆಲವು ಸಿನಿಮಾಗಳಲ್ಲಿಯೂ ನಟಿಸಿದ್ದರು. ಆದರೆ ಇದೀಗ ತಾರಾನಾತ್ ಹರೀಶ್ ಎಂಬಾತ ರೆಹಮಾನ್ ಅವರನ್ನು ಹಾಗೂ ಅವರ ಧರ್ಮದ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್ ಬುಕ್ ನಲ್ಲಿ ಕಮೆಂಟ್ ಮಾಡಿದ್ದು, ಬೇಸರಗೊಂಡ ರೆಹಮಾನ್ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ, ಮಾಜಿ ಸಂಸದೆ ರಮ್ಯಾ ಅವರ ಮದುವೆ ಬಗ್ಗೆ ಅವರ ತಾಯಿ ಹೇಳಿದ್ದಾದರೂ ಏನು ಗೊತ್ತಾ…?