Publish Date: Mon, 24 Sep 2018 (07:40 IST)
Updated Date: Mon, 24 Sep 2018 (07:45 IST)
ಬೆಂಗಳೂರು : ನಟ ದುನಿಯಾ ವಿಜಯ್ ಹಲ್ಲೆ ಮಾಡಿರುವ ಆರೋಪದಲ್ಲಿ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ವಿಜಯ್ ಮೊದಲ ಪತ್ನಿ ಹಾಗೂ ಎರಡನೇ ಪತ್ನಿಯ ನಡುವೆ ಕಿತ್ತಾಟ ಶುರುವಾಗಿದೆ.
ಜಿಮ್ ಟ್ರೈನರ್ ಮಾರುತಿ ಗೌಡರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿರುವ ಆರೋಪದಲ್ಲಿ ನಟ ದುನಿಯಾ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇದೀಗ ವಿಜಯ್ ಮೊದಲ ಪತ್ನಿ ನಾಗರತ್ನ ಅವರು ಎರಡನೇ ಪತ್ನಿ ಕೀರ್ತಿ ಗೌಡ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ವಿಜಯ್ ಮತ್ತು ನಾಗರತ್ನ ಅವರ ಮಗ ಸಾಮ್ರಾಟ್ ಗೆ ಅನಾರೋಗ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ನಾಗರತ್ನ ಅವರು ತಮ್ಮ ಮಗನನ್ನು ನೋಡಲು ಕೀರ್ತಿ ಗೌಡರ ಮನೆಗೆ ಬಂದಿದ್ದಾರೆ. ಈ ವೇಳೆ ಇಬ್ಬರು ಹೆಂಡತಿಯರ ಮಧ್ಯೆ ಜಗಳವಾಗಿದ್ದು, ಕೀರ್ತಿಗೌಡ ಬೌನ್ಸರ್ ಬಿಟ್ಟು ಹಲ್ಲೆ ಮಾಡಿಸಿದ್ದಾರೆಂದು ನಾಗರತ್ನ ದೂರು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.