Webdunia - Bharat's app for daily news and videos

Install App

ಇಂದ್ರಜಿತ್ ಲಂಕೇಶ್ ಅವರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು ಯಾಕೆ ಗೊತ್ತಾ…?

Webdunia
ಗುರುವಾರ, 11 ಜನವರಿ 2018 (07:20 IST)
ವಿಜಯಪುರ : ನಟ ಹಾಗು ನಿರ್ದೇಶಕರಾದ ಇಂದ್ರಜಿತ್ ಲಂಕೇಶ್ ಅವರು ವಿಜಯಪುರದ ಅತ್ಯಾಚಾರಗೈದು ಕೊಲೆಮಾಡಿದ ಅಪ್ರಾಪ್ತೆಯ ಕುಟುಂಬಕ್ಕೆ ಸರ್ಕಾರದ ಮಾಡಿದ ತಾರತಮ್ಯದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
ವಿಜಯಪುರದ ಅತ್ಯಾಚಾರಗೈದು ಕೊಲೆಮಾಡಿದ ಅಪ್ರಾಪ್ತೆಯ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು ಮಂಗಳೂರಿನಲ್ಲಿ ಕೊಲೆಯಾದ ದೀಪಕ್ ಹಾಗು ಬಶೀರ್ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡಿದ್ದ ಸರ್ಕಾರ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಅಪ್ರಾಪ್ತೆಯ ಕುಟುಂಬಕ್ಕೆ ಕೇವಲ 4 ಲಕ್ಷ  ನೀಡಿ ಸರ್ಕಾರ ತಾರತಮ್ಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
ನಂತರ ಮಾತನಾಡಿದ ಅವರು’ ಚಾರ್ಜಶೀಟ್ ಬಳಿಕ ಬಾಕಿ ಪರಿಹಾರ ನೀಡುತ್ತೇವೆ ಎಂದು ಹೇಳಿರುವುದು ದಲಿತರ ಮೇಲೆ ಮಾಡುತ್ತಿರುವ ದೌರ್ಜನ್ಯ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಪರಾದ ಪ್ರಕರಣಗಳು ನಾಲ್ಕು ಪಟ್ಟು ಜಾಸ್ತಿಯಾಗಿದೆ. ಹಾಡುಹಗಲೇ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ. ದಲಿತ ಬಾಲಕಿಯ ಮೇಲೆ ನಡೆದ ದೌರ್ಜನ್ಯ ದುರಾದೃಷ್ಟಕರ ಬೆಳವಣಿಗೆ ಎಂದರು. ನೊಂದ ಕುಟುಂಬದ ರಕ್ಷಣೆಗೆ ನಿಲ್ಲಬೇಕಿದ್ದ ಉಸ್ತುವಾರಿ ಮಂತ್ರಿ ಎಂ.ಬಿ.ಪಾಟೇಲ್ ಅವರು ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಧರ್ಮ ಜಾತಿಗಳ ನಡುವೆ ಸಂಘರ್ಷ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಮೊದಲು ದಲಿತ ಬಾಲಕಿಯ ಮೇಲೆ ಆಗಿರುವ ದೌರ್ಜನ್ಯಕ್ಕೆ ನ್ಯಾಯ ಕೊಡಿಸಲು ಮುಂದಾಗಲಿ’ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments