Webdunia - Bharat's app for daily news and videos

Install App

‘ಓ ಪ್ರೇಮವೇ’ ಚಿತ್ರದ ನಾಯಕಿ ನಿಕ್ಕಿ ಗಲ್ರಾನಿ ಮೇಲೆ ಸಾ.ರಾ.ಗೋವಿಂದ್ ಕೋಪಗೊಂಡಿದ್ಯಾಕೆ…?

Webdunia
ಭಾನುವಾರ, 8 ಏಪ್ರಿಲ್ 2018 (06:36 IST)
ಬೆಂಗಳೂರು : ಮನೋಜ್ ಅವರು ನಿರ್ದೇಶಿಸಿ, ನಟಿಸಿದ ‘ಓ ಪ್ರೇಮವೇ’ ಚಿತ್ರದ ನಾಯಕಿ ನಿಕ್ಕಿ ಗಲ್ರಾನಿ ಅವರ ಮೇಲೆ ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಕೋಪಗೊಂಡಿದ್ದಾರೆ.


ಕಾರಣ ‘ಓ ಪ್ರೇಮವೇ’ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಪ್ರಮೋಷನ್ ಗೆ ಬರಬೇಕಾಗಿದ್ದ ನಟಿ ನಿಕ್ಕಿ ಗಲ್ರಾನಿ ಅವರು ತಮಿಳು ಚಿತ್ರದಲ್ಲಿ ಬ್ಯುಸಿಯಾಗಿರುವುದರಿಂದ ಪ್ರಮೋಷನ್‍ಗೆ ಬರಲಾಗುತ್ತಿಲ್ಲ ಎಂದು ಹೇಳಿದ್ದಾರಂತೆ. ಇದರಿಂದಾಗಿ ಕೋಪಗೊಂಡ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,’
ಮನೋಜ್ ನಿರ್ದೇಶನದ `ಓ ಪ್ರೇಮವೇ' ಚಿತ್ರದ ಪ್ರಚಾರಕ್ಕೆ ಬಾರದೆ, ನಿರ್ಮಾಪಕರಿಗೆ ನಿಕ್ಕಿ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ. ಫೋನ್‌‌‌‌ ಮಾಡಿ ಸಮಸ್ಯೆ ಹೇಳಿಕೊಂಡರೂ, ಚೆನ್ನೈನಲ್ಲಿ ತಮಿಳು ಚಿತ್ರದಲ್ಲಿ ಬ್ಯುಸಿಯಾಗಿದ್ದೇನೆ. ಆದ್ದರಿಂದ  ಪ್ರಮೋಷನ್‍ಗೆ ಬರಲಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರು ಬೆಳೆದಿರುವುದು ಕನ್ನಡ ನೆಲದಲ್ಲಿ. ಈಗ ನೋಡಿದರೆ, ತಮಿಳು ಚಿತ್ರದ ಬಗ್ಗೆ ಮಾತನಾಡುತ್ತಾರೆ. ಇನ್ನು ಮುಂದೆ ಯಾವುದೇ ಚಿತ್ರವಿರಲಿ, ಆ ನಿರ್ಮಾಪಕರಿಗೆ ತೊಂದರೆ ಕೊಟ್ಟರೆ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಗೋವಿಂದು ಅವರು  ಎಚ್ಚರಿಕೆ ನೀಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments