Publish Date: Fri, 09 Mar 2018 (06:20 IST)
Updated Date: Fri, 09 Mar 2018 (06:23 IST)
ಬೆಂಗಳೂರು : ಇತ್ತಿಚೆಗೆ ತಮ್ಮ ನೆಚ್ಚಿನ ನಟನಿಗಾಗಿ ಅಭಿಮಾನಿಗಳು ಮಾಡುತ್ತಿರುವ ರಂಪಾಟದ ಬಗ್ಗೆ ನಾವು ಆಗಾಗ ಕೇಳುತ್ತಿರುತ್ತೇವೆ. ಅದೇರೀತಿ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟ ಕಿಚ್ಚ ಸುದೀಪ್ಅವರನ್ನು ನೋಡುವ ಸಲುವಾಗ ಅತಿರೇಕವಾಗಿ ವರ್ತಿಸಿದ ಘಟನೆ ಕನಕಪುರ ಬಳಿಯ ಸಾತನೂರಿನ ನಾಗಸೊಂಡೆ ಗ್ರಾಮದಲ್ಲಿ ನಡೆದಿದೆ.
ಕಿಚ್ಚ ಶಿವು ಎಂಬಾತ ಕಿಚ್ಚ ಸುದೀಪ್ ಅವರ ಅಭಿಮಾನಿಯಾಗಿದ್ದು ಈತ ಸುದೀಪ್ ಅವರನ್ನು ಭೇಟಿ ಮಾಡಬೇಕೆಂದು ಉಪವಾಸ ಸತ್ಯಾಗ್ರಹವನ್ನು ಮಾಡುತ್ತಿರುವುದಾಗಿ ತಿಳಿಸಿ ಈ ಕುರಿತು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದನ್ನು ನೋಡಿದ ಸುದೀಪ್ ಅವರ ಇತರೆ ಅಭಿಮಾನಿಗಳು ’ಸುದೀಪ್ ಅವರನ್ನು ಭೇಟಿ ಮಾಡಲು ಸಾವಿರ ದಾರಿಯಿದೆ. ಅದನ್ನ ಬಿಟ್ಟು ಈ ರೀತಿ ಮಾಡುವುದು ತಪ್ಪು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯ ತಿಳಿದ ನಟ ಸುದೀಪ್ ಅವರು ‘ನೀವು ಚೆನ್ನಾಗಿದ್ದರೆ ನನಗೆ ಖುಷಿ. ಉಪವಾಸ ಮಾಡಿ ನನಗೆ ನೋವು ಕೊಡಬೇಡಿ. ಭೇಟಿ ಮಾಡಲು ಬೇಕಾಗಿರುವುದು ಸಮಯ, ಪ್ರೀತಿ ಹಾಗೂ ತಾಳ್ಮೆ. ನಿಮ್ಮೆಲ್ಲರ ಪ್ರೀತಿಗೆ ಸದಾ ಚಿರಋಣಿ’ಎಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ