Publish Date: Wed, 14 Mar 2018 (15:04 IST)
Updated Date: Wed, 14 Mar 2018 (15:10 IST)
ಬೆಂಗಳೂರು : ವಿಷ್ಣುವರ್ಧನ್ ಅವರ ಸಮಾಧಿಯನ್ನು ಸ್ಥಳಾಂತರ ಮಾಡೋದು ಬೇಡ ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಟ ಕಿಚ್ಚ ಸುದೀಪ್ ಅವರ ಈಗ ಮತ್ತೊಮ್ಮೆ ಸಿಎಂ ಅವರನ್ನು ಭೇಟಿ ಮಾಡಿದ್ದಾರೆ.
ಸುದೀಪ್ ಅವರು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಸ್ಯಾಂಡಲ್‍ವುಡ್ ಕ್ರಿಕೆಟ್ ಟೂರ್ನಿಯ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸುದೀಪ್ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಎಲೆಕ್ಷನ್‍ನಲ್ಲಿ ನಮ್ಮ ಪರ ಪ್ರಚಾರ ಮಾಡಿ ಎಂದು ಕೇಳಿಕೊಂಡಿದ್ದಾರೆ ಎಂಬ ಮಾಹಿತಿ ಕೂಡ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ