ಅವ್ರನ್ನೆಲ್ಲಾ ಯಾಕೆ ಅರೆಸ್ಟ್ ಮಾಡಿಲ್ಲ, ನನಗೆ ನ್ಯಾಯ ಬೇಕೆಂದ ಡ್ರೋನ್ ಪ್ರತಾಪ್

Sampriya
ಮಂಗಳವಾರ, 24 ಡಿಸೆಂಬರ್ 2024 (19:06 IST)
ಮಧುಗಿರಿ: ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಟೋಟ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಡ್ರೋನ್‌ ಪ್ರತಾಪ್‌ ಇಂದು ಬಿಡುಗಡೆಯಾಗಿದ್ದಾರೆ.

ಜೈಲಿಂದ್ದ ಹೊರಬರುತ್ತಿದ್ದ ಹಾಗೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ನನಗೆ ನ್ಯಾಯ ಬೇಕು ಎಂದು ಅಳಲು ತೊಡಿಕೊಂಡಿದ್ದಾರೆ. ಬಂಧಿತರಾಗಿದ್ದ ಡ್ರೋನ್ ಪ್ರತಾಪ್ ಇಂದು ಮಧುಗಿರಿ ಉಪಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಒಂದೇ ಒಂದು ಪ್ರಶ್ನೇ ಕೇಳ್ತೀನಿ. ದೇಶಾದ್ಯಂತ ನೂರಾರು ಎಕ್ಸ್ ಪೆರಿಮೆಂಟ್ ಪೋಸ್ಟ್ ಮಾಡಿದ್ದಾರೆ. ಅವ್ರನ್ನೆಲ್ಲಾ ಯಾಕೆ ಅರೆಸ್ಟ್ ಮಾಡಿಲ್ಲಾ, ನನ್ನೊಬ್ಬನನ್ನೇ ಏಕೆ ಅರೆಸ್ಟ್ ಮಾಡಿದ್ದೀರಾ? ಹೊರದೇಶದಲ್ಲಿರಬಹುದು, ನಮ್ಮ ದೇಶದಲ್ಲಿರಬಹುದು.ಐಪಿಸಿ ದೇಶದಲೆಲ್ಲಾ ಒಂದೇ, ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಈಗಾಗಲೇ ಕೇಜಿಗಟ್ಟಲೇ ಸೋಡಿಯಂ ಉಪಯೋಗಿಸಿ‌ ಬೇರೆಯವರೆಲ್ಲಾ ಸೈನ್ಸ್ ಎಕ್ಸ್‌ಪೆರಿಮೆಂಟ್ ಮಾಡಿದ್ದಾರೆ. ಯಾರಾದ್ರು ಮೊಬೈಲ್ ಕೊಡಿ ಸರ್, ತೋರಿಸ್ತೀನಿ. CRAZY XYZ,MISTER INDIAN HACKER ಯೂಟ್ಯೂಬರ್ ಮಾಡಿದ್ದಾರೆ.

ನನ್ನ ಮೇಲೆ ತೆಗೆದುಕೊಂಡ ಕ್ರಮವೆಲ್ಲ ಅವರ ಮೇಲೆ ಯಾಕೆ ಆಗಿಲ್ಲ. ನಾನು ಮಾಡುವುದಕ್ಕಿಂತ ಮೊದಲೆ ಅವರೆಲ್ಲ ಮಾಡಿದ್ದಾರೆ. ಐಪಿಸಿ ಅಂದರೇ ಇಂಡಿಯಾ ಪೂರ್ತಿ ಒಂದೇ ಕಾನೂನು. ಅದು ಅರ್ಟಿಫಿಷಿಯಲ್ ಪಾಂಡ್. ಅವ್ರ ಮೇಲೆ ಏನು ಅಗದೇ ನನ್ನ ಮೇಲೆ ಮಾತ್ರ ಮಾಡ್ತಾರೆ ಅಂದ್ರೇ ಏನು ಅರ್ಥ.  ಈ ವಿಚಾರದಲ್ಲಿ ನನ್ನನ್ನು ಟಾರ್ಗೆಟ್ ಮಾಡಿದ್ದು, ನನಗೆ ನ್ಯಾಯ ಬೇಕೆ ಎಂದು ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments