ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್ ಗೆ ಈಗ ಅಭಿಮಾನಿಗಳು ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿರುವ ವಿಚಾರ ತಲೆನೋವಾಗಿದೆ. ಈ ಪ್ರಕರಣ ದರ್ಶನ್ ಗೆ ಕಂಟಕವಾಗುತ್ತಾ?
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪ್ರಮುಖ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ. ಇದೀಗ ಪೊಲೀಸರು ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪು ಬರುವುದೊಂದೇ ಬಾಕಿಯಿದೆ. ಕೋರ್ಟ್ ವಿಚಾರಣೆ ಪೂರ್ಣಗೊಳಿಸಿದ್ದು ತೀರ್ಪು ಕಾಯ್ದಿರಿಸಿತ್ತು.
ಈ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು ಸರಿಯಾಗಿದೆಯೇ ಎಂದು ವಿಚಾರಣೆ ನಡೆಸುವಾಗ ಸುಪ್ರೀಂಕೋರ್ಟ್ ದರ್ಶನ್ ಹಳೆಯ ಕೇಸ್ ಗಳು, ಅವರ ಪೂರ್ವಾಪರವನ್ನೆಲ್ಲಾ ವಿಚಾರಣೆ ನಡೆಸಿದೆ. ಇದು ದರ್ಶನ್ ಗೆ ನಿರ್ಣಾಯಕ ಘಟ್ಟವಾಗಿದ್ದು, ಈ ಹಂತದಲ್ಲಿ ಅಭಿಮಾನಿಗಳು ಮಾಡುವ ಅತಿರೇಕದ ವರ್ತನೆಗಳು ಅವರ ತೀರ್ಪಿನ ಮೇಲೆ ಪರಿಣಾಮ ಬೀರದೇ ಇದ್ದರೂ ವಿಚಾರಣೆ ಹಂತದಲ್ಲಿ ದರ್ಶನ್ ವ್ಯಕ್ತಿತ್ವದ ಬಗ್ಗೆ ಸುಪ್ರೀಂಕೋರ್ಟ್ ಈ ಎಲ್ಲಾ ಅಂಶಗಳನ್ನು ಪರಿಗಣಿಸಬಹುದು. ಹೀಗಾಗಿ ಅಭಿಮಾನಿಗಳ ಅತಿರೇಕದ ವರ್ತನೆ ದರ್ಶನ್ ಗೆ ಮುಳುವಾಗಲೂ ಬಹುದು.