ಡೀಪ್ ಫೇಕ್ ವಿಡಿಯೋ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರಾ ರಶ್ಮಿಕಾ ಮಂದಣ್ಣ?

Webdunia
ಮಂಗಳವಾರ, 7 ನವೆಂಬರ್ 2023 (08:50 IST)
ಮುಂಬೈ: ನಟಿ ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ವೈರಲ್ ಆಗುತ್ತಿದ್ದಂತೇ ಇದೀಗ ಚಿತ್ರರಂಗ, ಅಭಿಮಾನಿಗಳು ಅವರ ಬೆಂಬಲಕ್ಕೆ ನಿಂತಿದ್ದಾರೆ.

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ರಶ್ಮಿಕಾರ ಡೀಪ್ ಫೇಕ್ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇದರಲ್ಲಿ ರಶ್ಮಿಕಾರನ್ನು ಅಶ್ಲೀಲವಾಗಿ ತೋರಿಸಲಾಗಿದೆ. ಈ ವಿಡಿಯೋ ನೋಡಿ ಸ್ವತಃ ರಶ್ಮಿಕಾ ಶಾಕ್ ಗೊಳಗಾಗಿರುವುದಾಗಿ ಹೇಳಿದ್ದಾರೆ.

ಈ ವಿಡಿಯೋ ಮೊದಲು ಬ್ರಿಟಿಷ್ ಇಂಡಿಯನ್ ಝರಾ ಪಟೇಲ್ ಎಂಬವರ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಕ್ಟೋಬರ್ 9 ರಂದು ಮೊದಲ ಬಾರಿಗೆ ಪ್ರಸಾರವಾಗಿತ್ತು. ಇದೀಗ ಎಲ್ಲೆಡೆ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೇ ಬಾಲಿವುಡ್  ಬಿಗ್ ಬಿ ಅಮಿತಾಭ್ ಬಚ್ಚನ್ ಸೇರಿದಂತೆ ಚಿತ್ರರಂಗದ ಕಲಾವಿದರು ರಶ್ಮಿಕಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ರೀತಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಓರ್ವ ವ್ಯಕ್ತಿಯ ಘನತೆಗೆ ಕುತ್ತು ತರುವಂತಹ ವಿಡಿಯೋ ಹರಿಯಬಿಡುವವರ  ವಿರುದ್ಧ ಕಠಿಣ ಕಾನೂನು ಕ್ರಮ ರೂಪಿಸಬೇಕಿದೆ ಎಂದು ಹಲವರು ಆಗ್ರಹಿಸಿದ್ದಾರೆ. ಅಮಿತಾಭ್ ಬಚ್ಚನ್ ಕೂಡಾ ರಶ್ಮಿಕಾಗೆ ಕಾನೂನು ಕ್ರಮ ಕೈಗೊಳ್ಳಲು ಸಲಹೆ ನೀಡಿದ್ದಾರೆ.

ತನಗೆ ಬೆಂಬಲವಾಗಿ ನಿಂತ ಅಮಿತಾಭ್ ಗೆ ರಶ್ಮಿಕಾ ಧನ್ಯವಾದ ಸಲ್ಲಿಸಿದ್ದಾರೆ. ಇದೀಗ ತನ್ನ ಚಾರಿತ್ರ್ಯವಧೆ ಮಾಡಿದ ಫೇಕ್ ವಿಡಿಯೋ ನಿರ್ಮಾಪಕರ ವಿರುದ್ಧ ರಶ್ಮಿಕಾ ಕಾನೂನು ಕ್ರಮ ಕೈಗೊಳ್ಳುತ್ತಾರಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments