Publish Date: Sun, 12 May 2024 (12:27 IST)
Updated Date: Sun, 12 May 2024 (12:33 IST)
'ಗೀತ ಗೋವಿಂದಂ' ಸಿನಿಮಾ ಮೂಲಕ ಮೋಡಿ ಮಾಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಅಂದಿನಿಂದ ಇಂದಿನವರೆಗೂ ಸ್ನೇಹವನ್ನು ಕಾಪಾಡಿಕೊಳ್ಳುತ್ತಾ ಬಂದಿದ್ದಾರೆ. ಅದಲ್ಲದೆ ಈ ಜೋಡಿಗಳ ಮಧ್ಯೆ ಸ್ನೇಹಕ್ಕಿಂತ ಮಿಗಿಲಾಗಿರುವ ಬಂಧವಿದೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿದೆ.
'ಗೀತಾ ಗೋವಿಂದಂ' ಸಿನಿಮಾ ನಂತರ ಡಿಯರ್ ಕಾಮ್ರೇಡ್ ಸಿನಿಮಾದಲ್ಲಿ ಈ ಜೋಡಿ ಒಟ್ಟಿಗೆ ರೋಮ್ಯಾಂಟಿಕ್ ಆಗಿ ನಟಿಸಿದ್ದರು, ಅದೇನೂ ಹೇಳುವಷ್ಟು ಸಿನಿಮಾ ಹೆಸರು ತಂದುಕೊಟ್ಟಿಲ್ಲ.
ನಂತರ ವಿಜಯ್ ದೇವರಕೊಂಡ ನಟನೆಯ "ಫ್ಯಾಮಿಲಿ ಸ್ಟಾರ್"ನಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಾರೆಂಬ ಸುದ್ದಿ ಹಬ್ಬಿತ್ತು. ಇದೀಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅಭಿಮಾನಿಗಳಿಗೆ ಸಿಹಿ ಸುದ್ದಿಯಿದೆ.
"ಟ್ಯಾಕ್ಸಿವಾಲಾ" ನಿರ್ದೇಶಕ ರಾಹುಲ್ ಸಾಂಕೃತ್ಯಾನ್ ಅವರ ಮುಂದಿನ ಸಿನಿಮಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಮತ್ತೇ ತೆರೆ ಮೇಲೆ ಮೋಡಿ ಮಾಡಲಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಪ್ರಸ್ತುತ ರಶ್ಮಿಕಾ ಮಂದಣ್ಣ ಪುಷ್ಪ 2, ಕುಬೇರ, ಚಾವಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ವಿಜಯ್ ದೇವರಕೊಂಡ ಮುಂದಿನ ಚಿತ್ರಕ್ಕೆ ಅವರು ನಾಯಕಿಯಾಗಿದ್ದಾರೆ ಎನ್ನಲಾಗಿದೆ.