ಹೈದರಾಬಾದ್ : ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ತೆಲಂಗಾಣ ಸರ್ಕಾರ ರಾಜ್ಯದ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಇಂದು ರಜೆ ಘೋಷಿಸಿದೆ.
ಸಿಎಂ ಚಂದ್ರಶೇಕರ್ ರಾವ್ ಅವರು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಪುರುಷರೊಂದಿಗೆ ಸ್ಪರ್ಧಿಸುತ್ತಿದ್ದಾರೆ. ಜನಸಂಖ್ಯೆಯ ಶೆ.50ರಷ್ಟು ಮಹಿಳೆಯರಿಗೆ ಅವಕಾಶ ನೀಡಿದರೆ ಅದ್ಭುತಗಳನ್ನು ಮಾಡುತ್ತಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ ಸರ್ಕಾರ ಮಹಿಳೆಯರನ್ನು ಅಭಿವೃದ್ಧಿ ಮತ್ತು ಪ್ರಗತಿಯ ಹಾದಿಯಲ್ಲಿ ಸಾಗಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಎಸ್ ಇಇ ಸ್ಥಾಪನೆ, ವೃದ್ಧ ಹಾಗು ವಿಧವಾ ಮತ್ತು ಒಂಟಿ ಮಹಿಳೆಯರಿಗೆ ಪಿಂಚಣಿ, ಶಾದಿ ಮುಬಾರಕ್ ಮತ್ತು ಕಲ್ಯಾಣ್ ಲಕ್ಷ್ಮಿ ರಂತಹ ಯೋಜನೆಗಳು ಸೇರಿಸಲಾಗಿದೆ. ಕೆಸಿಆರ್ ಕಿಟ್ ಗಳು , ಆಶಾ ಕಾರ್ಮಿಕರು ಮತ್ತು ಅಂಗನವಾಡಿ ಶಿಕ್ಷಕರ ವೇತನ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.