Publish Date: Sun, 31 Oct 2021 (09:39 IST)
Updated Date: Sun, 31 Oct 2021 (09:40 IST)
ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಣ್ಣ ಶಿವರಾಜ್ಕುಮಾರ್, ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು.
ಪುನೀತ್ ಅವರಿಗೆ ಗಂಡು ಮಕ್ಕಳಿಲ್ಲ. ಆ ಕಾರಣದಿಂದ ಅವರ ಸಹೋದರ ರಾಘವೇಂದ್ರ ರಾಜ್ಕುಮಾರ್ ಅವರ ಪುತ್ರ ವಿನಯ್ ರಾಜ್ಕುಮಾರ್ ಅವರಿಂದ ಅಂತಿಮ ವಿಧಿವಿಧಾನಗಳನ್ನು ಮಾಡಿಸಲಾಯಿತು. ಬಳಿಕ ಪುನೀತ್ ಪುತ್ರಿಯರು ಅಪ್ಪನ ಸಮಾಧಿಗೆ ಪೂಜೆ ಸಲ್ಲಿಸಿದರು.
ಇಂದು ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ಅವರ ಇಬ್ಬರು ಪುತ್ರಿಯರು ತಂದೆಗಾಗಿ ಅಶ್ರ ಧಾರೆ ಹರಿಸಿದ್ದಾರೆ.