ಬೆಂಗಳೂರು: ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ನಟ ಹ್ಯಾಟ್ರಿಕ್ ಹೀರೋ ಶಿವಣ್ಣ ಅವರನ್ನು ಭೇಟಿಯಾಗಲು ನಟ ಯಶ್ ಮತ್ತು ರಾಧಿಕಾ ದಂಪತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶಿವಣ್ಣ ಅವರ ಆರೋಗ್ಯದಲ್ಲಿ ಚೇತರಿಕೆಯ ನಂತರ ಮೊದಲ ಬಾರಿಗೆ ಯಶ್ ದಂಪತಿ ಭೇಟಿ ಕೊಟ್ಟಿದ್ದಾರೆ.
ಶಿವಣ್ಣ ಅವರು ಅಮೆರಿಕಾಕ್ಕೆ ಚಿಕಿತ್ಸೆ ಪಡೆಯಲು ಹೊರಟಾಗ ಯಶ್ ಅವರು ತಮ್ಮ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರು. ಆ ನಂತರ ಗುಣಮುಖರಾಗಿ ವಿದೇಶದಿಂದ ಬಂದ್ಮೇಲೆಯೂ ಶಿವಣ್ಣರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ನಟನ ವಿವಾಸಕ್ಕೆ ಯಶ್ ಮತ್ತು ರಾಧಿಕಾ ಆಗಮಿಸಿದ್ದಾರೆ. ಶಿವಣ್ಣನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಕೆಲವು ತಿಂಗಳು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದರು. ಡಿಸೆಂಬರ್ 24ರಂದು ಶಿವಣ್ಣಗೆ ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿತ್ತು. ಅದು ಯಶಸ್ವಿಯಾಗಿದೆ. ಸದ್ಯ ಶಿವಣ್ಣ ಇದೀಗ ಸಿನಿಮಾಗಳಿಂದ ಬ್ರೇಕ್ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ.
ಇನ್ನೂ ನಿನ್ನೆ ಪುನೀತ್ ರಾಜ್‌ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆ ಸಮಾಧಿ ಬಳಿ ತೆರಳಿ ಶಿವಣ್ಣ ಪೂಜೆ ಸಲ್ಲಿಸಿದ್ದರು.