Publish Date: Thu, 25 Jul 2024 (16:41 IST)
Updated Date: Thu, 25 Jul 2024 (16:47 IST)
ಬೆಂಗಳೂರು: ಕೆಜಿಎಫ್ ಖ್ಯಾತಿಯ ಯಶ್ ಅವರು ಇದೀಗ ತಮ್ಮ ಮುಂಬರುವ ಸಿನಿಮಾ ಟಾಕ್ಸಿಕ್‌ಗೆ ತಯಾರಿ ನಡೆಸುತ್ತಿದ್ದಾರೆ. ಅವರು ಈಚೆಗೆ ಸಿನಿಮಾಗಾಗಿ ತಮ್ಮ ಉದ್ದನೆಯ ಕೂದಲಿಗೆ, ಗಡ್ಡಕ್ಕೆ ಕತ್ತರಿ ಹಾಕಿದ್ದರು. ಯಶ್ ಅವರ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದರು.
ಆದರೆ ಇದೀಗ ಟಾಕ್ಸಿಕ್ ಚಿತ್ರತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಟಾಕ್ಸಿಕ್ ಚಿತ್ರಕ್ಕಾಗಿ ನಿರ್ಮಿಸಿರುವ ಸೆಟ್‌ನಿಂದ ಸಮಸ್ಯೆ ಎದುರಾಗಿದೆ ಎಂದು ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರಕ್ಕಾಗಿ ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ 20 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿದ್ದು ಇದರಿಂದ ತೊಂದರೆಯಾಗುತ್ತಿದೆ ಎಂದು ದೂರಾಗಿದೆ.
ವಕೀಲ ಜಿ.ಬಾಲಾಜಿ ನಾಯ್ಡು ಅವರು ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಸೆಟ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಹೈಕೋರ್ಟ್ ಟಾಕ್ಸಿಕ್ ಚಿತ್ರದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಮ್ತತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ.