Webdunia - Bharat's app for daily news and videos

Install App

ಟಾಕ್ಸಿಕ್ ಮೂವಿ ಶೂಟಿಂಗ್ ಫೋಟೋ ಲೀಕ್: ಗೋವಾದಲ್ಲಿ ಯಶ್ ಶೂಟಿಂಗ್

Krishnaveni K
ಶುಕ್ರವಾರ, 15 ಮಾರ್ಚ್ 2024 (10:37 IST)
Photo Courtesy: Twitter
ಪಣಜಿ: ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಟಾಕ್ಸಿಕ್ ಮೂವಿ ಶೂಟಿಂಗ್ ಗೋವಾದಲ್ಲಿ ಭರದಿಂದ ಸಾಗುತ್ತಿದೆ. ಶೂಟಿಂಗ್ ಫೋಟೋಗಳು ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ.

ಮಲಯಾಳಂ ಮೂಲದ ನಿರ್ದೇಶಕಿ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳುತ್ತಿರುವ ಸಿನಿಮಾ ಇದಾಗಿದೆ. ನಿರ್ದೇಶಕಿ ಮತ್ತು ಚಿತ್ರತಂಡದ ಜೊತೆ ಯಶ್ ಪ್ರಮುಖ ದೃಶ್ಯವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ.

ಗೋವಾ ಮತ್ತು  ವಿದೇಶಗಳಲ್ಲಿ ಟಾಕ್ಸಿಕ್‍ ಸಿನಿಮಾದ ಶೂಟಿಂಗ್ ಗೆ ಈಗಾಗಲೇ ಚಿತ್ರತಂಡ ಲೊಕೇಷನ್ ಗುರುತಿಸಿಕೊಂಡಿದೆ. ಈ ಸಿನಿಮಾದಲ್ಲಿ ಡ್ರಗ್ಸ್ ಪೆಡ್ಲರ್ ಗಳ ಕುರಿತಾದ ಕತೆಯಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾವಿದು. ಪ್ಯಾನ್ ಇಂಡಿಯಾ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಕೆಜಿಎಫ್ ಸಿನಿಮಾ ಬಳಿಕ ಯಶ್ ಮಾಡುತ್ತಿರುವ ಹೊಸ ಸಿನಿಮಾವಿದು. ಕೆಜಿಎಫ್ ಯಶ್ ಗೆ ನ್ಯಾಷನಲ್ ಸ್ಟಾರ್ ಪಟ್ಟ ಕೊಟ್ಟಿದೆ. ಹೀಗಾಗಿ ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಭಾರೀ ನಿರೀಕ್ಷೆಯಿದೆ. ಈ ಸಿನಿಮಾಗಾಗಿ ಯಶ್ ಎರಡು ವರ್ಷಗಳಿಂದ ಹೋಂ ವರ್ಕ್ ಮಾಡಿದ್ದಾರೆ. ಇದೀಗ ಆನ್ ಲೈನ್ ನಲ್ಲಿ ಸಿನಿಮಾ ಶೂಟಿಂಗ್ ಫೋಟೋಗಳು ಸೋರಿಕೆಯಾಗಿರುವುದು ಚಿತ್ರತಂಡಕ್ಕೆ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ಮುಂದಿನ ಸುದ್ದಿ
Show comments