ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕಾವೇರಿ ವಿವಾದ ವಿಷಯದಲ್ಲಿ ಮಾಧ್ಯಮಗಳಿಗೆ ಸವಾಲು ಹಾಕುವ ವಿಡಿಯೋ ಅಪ್ ಲೋಡ್ ಮಾಡಿ ಸುದ್ದಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಈಗ ಮತ್ತೊಂದು ವಿಡಿಯೋ ಅಪ್ ಲೋಡ್ ಮಾಡಿದ್ದಾರೆ.
ಆದರೆ ಈ ಬಾರಿ ಅವರು ವಿಡಿಯೋದಲ್ಲಿ ವಿವಾದಾತ್ಮಕ ಸಂದೇಶವೇನೂ ಹೇಳಿಲ್ಲ. ಇತ್ತೀಚೆಗೆ ಬಿಡುಗಡೆಯಾದ ಸಂತು ಚಿತ್ರ ನೋಡಿ ಹರಸಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ದೀಪಾವಳಿ ಶುಭಾಶಯಗಳನ್ನೂ ತಿಳಿಸಿದ್ದಾರೆ.
ಇದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿದ್ದ ನಿರ್ಮಾಪಕ ಕೆ. ಮಂಜು ಚಿತ್ರದ ಬಗ್ಗೆ ನೆಗೆಟಿವ್ ಆಗಿ ವರದಿ ಮಾಡಿದ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದರು. ಆದರೆ ಯಶ್ ಯಾವುದೇ ಮಾಧ್ಯಮಗಳ ಮುಂದೆ ಚಿತ್ರದ ಪ್ರಚಾರಕ್ಕಾಗಿ ಕಾಣಿಸಿಕೊಳ್ಳಲಿಲ್ಲ. ಮಾಧ್ಯಮಗಳ ಮುಲಾಜಿಲ್ಲದೆ, ಸಾಮಾಜಿಕ ಜಾಲತಾಣಗಳ ಮೂಲಕ ನೇರವಾಗಿ ಜನರ ಬಳಿ ಚಿತ್ರದ ಬಗ್ಗೆ ಹೇಳಿಕೊಂಡಿರುವುದು ವಿಶೇಷ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ