Publish Date: Sun, 10 Apr 2022 (15:18 IST)
Updated Date: Sun, 10 Apr 2022 (15:20 IST)
ಭಾರೀ ಕುತೂಹಲ ಮೂಡಿಸಿರುವ ಕೆಜಿಎಫ್-2 ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಿತ್ರ ತಂಡ ಭಾನುವಾರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದೆ.
ನಟ ಯಶ್ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹೆಲಿಕಾಪ್ಟರ್‍ನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್ ಹಾಗೂ ವಿಜಯ್ ಕಿರಂಗದೂರು ನಂತರ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.
ಕುಕ್ಕೆಯಲ್ಲಿ ದೇವರ ದರ್ಶನ ಪಡೆದು ನಂತರ ಧರ್ಮಸ್ಥಳಕ್ಕೆ ಮರಳಿದ ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಕುಕ್ಕೆ ಹಾಗೂ ಧರ್ಮಸ್ಥಳ ಭೇಟಿ ಬಳಿಕ ಯಶ್ ಅವರು ಉಜಿರೆಯಲ್ಲಿರುವ ಇತಿಹಾಸ ಪ್ರಸಿದ್ಧ ಸೂರ್ಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ.