ವರ್ಷಾಂತ್ಯದಲ್ಲಿ ಸಿನಿಮಾ ಸುಗ್ಗಿ: ಡಿಸೆಂಬರ್‌ನಲ್ಲಿ ಡಾಲಿಯ ಉತ್ತರಕಾಂಡ ತೆರೆಗೆ ಸಾಧ್ಯತೆ

Sampriya
ಸೋಮವಾರ, 27 ಮೇ 2024 (16:46 IST)
Photo Courtesy X
ಬೆಂಗಳೂರು: ಡಾಲಿ ಧನಂಜಯ್-ಶಿವರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಮತ್ತೊಂದು ಬಹುನಿರೀಕ್ಷೆಯ ಚಿತ್ರ ಉತ್ತರಕಾಂಡ ಇದೇ ವರ್ಷ ಡಿಸೆಂಬರ್‌ನಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ. ಆದರೆ, ಈ ವರ್ಷಾಂತ್ಯದಲ್ಲಿ ಸಾಲುಸಾಲು ಬಿಗ್‌ ಬಜೆಟ್‌ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದ್ದು, ಮತ್ತೊಂದು ಸುತ್ತಿನ ಪೈಪೋಟಿ ಎದುರಾಗುವ ಸಾಧ್ಯತೆಯಿದೆ.

ಡಿಸೆಂಬರ್ ತಿಂಗಳಿನಲ್ಲಿ ಬಹುತೇಕ ಚಿತ್ರಮಂದಿರಗಳು ಭರ್ತಿಯಾಗಲಿವೆ. ಏಕೆಂದರೆ, ಆ ವೇಳೆಗೆ ಕನ್ನಡದ ಸ್ಟಾರ್‌ ನಟದ ದೊಡ್ಡ ಬಜೆಟ್‌ ಸಿನಿಮಾಗಳನ್ನು ಬಿಡುಗಡೆ ಮಾಡಲು ಯೋಜನೆ ಹಾಕಲಾಗುತ್ತದೆ. ದರ್ಶನ್, ಧ್ರುವ ಸರ್ಜಾ ಮತ್ತು ಡಾಲಿ ಧನಂಜಯ್ ಅಭಿನಯದ ಸಿನಿಮಾಗಳನ್ನು ಡಿಸೆಂಬರ್‌ನಲ್ಲಿ ತೆರೆಗೆ ತರಲು ಸಿದ್ಧತೆ ನಡೆಯುತ್ತಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ  ಡೆವಿಲ್ ಈ ವರ್ಷ ಕ್ರಿಸ್‌ಮಸ್‌ಗೆ ತೆರೆಕಾಣಲಿದೆ ಎಂದು ವೈಷ್ಣೋ ಸ್ಟುಡಿಯೋಸ್ ಈಗಾಗಲೇ ಘೋಷಿಸಿದೆ. ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಬಹುಭಾಷಾ ಚಿತ್ರ ಕೆಡಿ ಕೂಡ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಕಾಣುವ ಸಾಧ್ಯತೆ ಇದೆ. ಇದೀಗ ಆ ಸಾಲಿಗೆ ಡಾಲಿ ಧನಂಜಯ್ ಚಿತ್ರ ಸೇರ್ಪಡೆಯಾಗಿದೆ.

ಉತ್ತರಕಾಂಡ ಸಿನಿಮಾದ ಚಿತ್ರೀಕರಣ ಬೆಳಗಾವಿಯಲ್ಲಿ ಎರಡನೇ ಶೆಡ್ಯೂಲ್‌ಗೆ ಸಾಗಿದ್ದು, ಶಿವಣ್ಣ ಇತ್ತೀಚೆಗೆ ಸೆಟ್‌ಗೆ ಸೇರಿದ್ದಾರೆ. ಉತ್ತರಕಾಂಡ ಸಿನಿಮಾ ಟಗರು ಖ್ಯಾತಿಯ ಹಿಟ್ ಜೋಡಿ ಶಿವಣ್ಣ ಮತ್ತು ಧನಂಜಯ್ ಅವರನ್ನು ಬೆಳ್ಳಿತೆರೆಯಲ್ಲಿ ಮತ್ತೆ ಒಂದಾಗಿಸುವುದು ಮಾತ್ರವಲ್ಲದೆ ತಮಿಳು ನಟಿ ಐಶ್ವರ್ಯಾ ರಾಜೇಶ್ ಅವರು ಈ ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದಲ್ಲದೆ, ಚಿತ್ರದಲ್ಲಿ ಶಿವಣ್ಣ ಜೊತೆಗೆ ಭಾವನಾ ಮತ್ತು ದಿಗಂತ್ ಮತ್ತು ಚೈತ್ರ ಜೆ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದು, ಉಮಾಶ್ರೀ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments