ನೀವು ಬರೀ ಸಂಬಳ ಜಾಸ್ತಿ ಮಾಡುವುದು ಅಷ್ಟೆ ಅಲ್ಲ. ಇಲ್ಲಿ ಕೂತಿರುವ ಹೆಣ್ಣುಮಕ್ಕಳಲ್ಲಿ ಕ್ಷಮೆ ಕೇಳಬೇಕು ಎಂದು ಹುಚ್ಚ ವೆಂಕಟ್ ಹೇಳಿದ್ದು ಯಾರಿಗೆ ಗೊತ್ತಾ...?

Webdunia
ಶುಕ್ರವಾರ, 9 ಫೆಬ್ರವರಿ 2018 (06:34 IST)
ಬೆಂಗಳೂರು : ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಗೆ  ನಟ ಹುಚ್ಚ ವೆಂಕಟ್ ಅವರು  ಬೆಂಬಲವನ್ನು ನೀಡಿದ್ದಾರೆ.


ಕನಿಷ್ಟ ವೇತನ, ಪಿಎಫ್, ಇಎಸ್‍ಐ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಹುಚ್ಚ ವೆಂಕಟ್ ಅವರು ಭೇಟಿ ನೀಡಿ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತಿದ್ದಾರೆ. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೆಣ್ಣುಮಕ್ಕಳ ವಿಚಾರವಾಗಿ ಮೊದಲು ಧ್ವನಿ ಎತ್ತಿದ್ದು ನಾನು. ಹೆಣ್ಮಕ್ಕಳ ವಿಚಾರ ಬಂದರೆ ಸಾಯುವವರೆಗೂ ಧ್ವನಿ ಎತ್ತುವುದು ನಾನು. ಹಣ್ಮಕ್ಕಳನ್ನು ಈ ರೀತಿ ಬೀದಿಯಲ್ಲಿ ಕೂರಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತನ್ವೀರ್ ಸೇಠ್ ಈ ವಿಚಾರದಲ್ಲಿ ತಲೆ ಹಾಕಬೇಕು. ಸಿದ್ದರಾಮಯ್ಯ ಅವರು ತೀರ್ಮಾನ ತೆಗೆದುಕೊಳ್ಳಬೇಕು. 2000 ರೂಪಾಯಿಯಲ್ಲಿ ನಾನು, ನೀವು ಹೆಂಡತಿ ಮಕ್ಕಳನ್ನು ಸಾಕುವುದಕ್ಕೆ ಆಗುತ್ತಾ? ಇವರು ತುಂಬಾ ಒಳ್ಳೆಯ ಅಡುಗೆ ಮಾಡುತ್ತಾರೆ. ನೀವು ಸಂಬಳ ಕೊಟ್ಟಿಲ್ಲ ಅಂದ್ರೆ ಅವರು ಕೆಟ್ಟ ಅಡುಗೆ ಮಾಡಿದ್ರೆ ಆಗ ನಿಮ್ಮ ಹೆಸರು ಹಾಳಾಗಲ್ವಾ? ಆದ್ರೆ ಅವರಿಗೂ ಮಕ್ಕಳು ಇದ್ದಾರೆ. ಆದ್ದರಿಂದ ಅವರು ಆ ರೀತಿ ಮಾಡುವುದಿಲ್ಲ. ಆದ್ದರಿಂದ ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಯಮ್ಯ ತೀರ್ಮಾನ ತೆಗೆದುಕೊಳ್ಳಬೇಕು. ಹೆಣ್ಣುಮಕ್ಕಳ ವಿಷಯ ಬಂದರೆ ನಾನು ಜೈಲಿಗೂ ಹೋಗಲು ಸಿದ್ಧನಾಗಿದ್ದೇನೆ. ನೀವು ಬರೀ ಸಂಬಳ ಜಾಸ್ತಿ ಮಾಡುವುದು ಅಷ್ಟೆ ಅಲ್ಲ. ಇಲ್ಲಿ ಕೂತಿರುವ ಹೆಣ್ಣು ಮಕ್ಕಳಿಗೆ ಕ್ಷಮೆ ಕೇಳಬೇಕು’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments