Daily Horoscope

Select Your Language

Notifications

webdunia
webdunia
webdunia
webdunia

ಶೂಟಿಂಗ್ ಮುಗಿಸಿ ವಾಪಾಸ್ಸಾಗುತ್ತಿದ್ದಾಗ ಭೀಕರ ಅಪಘಾತ, ಯುವ ನಟಿ ಹರ್ಷಿಲ್ ಕಾಲಿಯಾ ಸಾವು

Harshil Kalia Death
Photo Credit X
ರಾಜಸ್ಥಾನಿ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಅವರು ಸೋಮವಾರ (ಮಾರ್ಚ್ 23) ಜೈಪುರದಲ್ಲಿ ತಮ್ಮ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸಾವನ್ನಪ್ಪಿದ್ದಾರೆ. 
30ವರ್ಷದ ನಟಿಯ ಸಾವಿನ ಸುದ್ದಿ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನು ನೀಡಿದೆ. 

ಹರ್ಷಿಲ್ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಶಿಪ್ರಾ ಪಥ್ ರಸ್ತೆಯಲ್ಲಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಆಕೆಯ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎಡಭಾಗಕ್ಕೆ ಪಲ್ಟಿಯಾಗಿದೆ ಎನ್ನಲಾಗಿದೆ. 

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಅಪಘಾತದ ನಿಖರವಾದ ಕ್ಷಣವನ್ನು ಸೆರೆಹಿಡಿಯಲಾಗಿದ್ದು, ವಾಹನವು ಸಮತೋಲನ ಕಳೆದುಕೊಂಡು ಪಲ್ಟಿಯಾಗಿದೆ ಎಂದು ತೋರಿಸುತ್ತದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಆದರೆ ಆಗಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ದೃಢಪಡಿಸಿದರು.   ಆಕೆಯ ತಲೆಗೆ ತೀವ್ರ ಗಾಯಗಳಾಗಿದ್ದು, ಇದು ಮಾರಣಾಂತಿಕವಾಗಿದೆ ಎಂದು ವರದಿಗಳು ಸೂಚಿಸುತ್ತವೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ. ಅಪಘಾತದ ಸಮಯದಲ್ಲಿ ವಾಹನದ ಸ್ಥಿತಿ ಮತ್ತು ರಸ್ತೆ ಪರಿಸ್ಥಿತಿ ಸೇರಿದಂತೆ ಎಲ್ಲಾ ಅಂಶಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಆಕೆಯ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೈವವನ್ನು ದೆವ್ವ ಎಂದ ರಣವೀರ್‌ ಸಿಂಗ್‌ ಚಾಮುಂಡಿ ಬೆಟ್ಟದಲ್ಲಿ ಕ್ಷಮೆಕೋರಬೇಕು