ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

Sampriya
ಗುರುವಾರ, 19 ಜೂನ್ 2025 (17:41 IST)
Photo Credit X
ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿದ್ದ ವೇಳೆ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯುವ ರಾಜ್‌ಕುಮಾರ್ ಅವರು ಬಹಿರಂಗವಾಹಿ ಕ್ಷಮೆ ಕೋರಿದ್ದಾರೆ. 

ಎಕ್ಕ ಸಿನಿಮಾದ ಸುದ್ದಿಗೋಷ್ಠಿಯಲ್ಲಿ  ಘಟನೆಗೆ ಪಶ್ಚಾತ್ತಾಪ ಪಟ್ಟು ಮಹಿಳೆಗೆ ಕ್ಷಮೆ ಕೇಳಿದ್ದಾರೆ. ಮಹಿಳೆ ಮೇಲೆ ಕಾರು ಹತ್ತಿಸಿ ತಪ್ಪಿಸಿಕೊಂಡು ಹೋಗಿದ್ದಾರೆ ಎಂಬ ಆರೋಪ ಯುವರಾಜ್‌ಕುಮಾರ್ ಮೇಲೆ ಕೇಳಿಬಂದಿತ್ತು. ಇದೀಗ ಘಟನೆಯ ಸಂಪೂರ್ಣ ಚಿತ್ರಣ ಬಿಚ್ಚಿಟ್ಟಿದ್ದಾರೆ. ಘಟನೆಗೆ ನೊಂದು ಕ್ಷಮೆಯನ್ನೂ ಯಾಚಿಸಿದ್ದಾರೆ.

ಸಿದ್ದಗಂಗಾ ಮಠಕ್ಕೆ ನಟ ಯುವ ರಾಜ್‌ಕುಮಾರ್ ಆಗಮನದ ಹಿನ್ನೆಲೆ ಆ ಸ್ಥಳದಲ್ಲಿ ಭಾರೀ ಜನಸೇರಿತ್ತು.  ಆಗ ನಡೆದ ತಳ್ಳಾಟ ನೂಕಾಟದಲ್ಲಿ ಯುವ ರಾಜ್‌ಕುಮಾರ್ ಕುಳಿತಿದ್ದ ಕಾರು ಮಹಿಳೆಯ ಕಾಲ ಮೇಲೆ ಹರಿದಿತ್ತು. ಘಟನೆಯಿಂದ ಮಹಿಳೆಯ ಕಾಲಿಗೆ ಪೆಟ್ಟಾಗಿತ್ತು. ಘಟನೆ ನಡೆದು ಮೂರು ದಿನಗಳ ಬಳಿಕ ಆ ವಿಚಾರವಾಗಿ ಇದೀಗ ಯುವರಾಜ್‌ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. 


ನನಗೆ ಮಹಿಳೆಯ ಕಾಲ ಮೇಲೆ ಕಾರು ಹತ್ತಿದ್ದ ವಿಚಾರ ತಿಳಿದಿರಲಿಲ್ಲ. ಬೆಂಗಳೂರಿಗೆ ವಾಪಾಸ್ ಬಂದ್ಮೇಲೆ ಈ ವಿಚಾರ ಗೊತ್ತಾಯಿಯಿತು. ಘಟನೆ ಬಗ್ಗೆ ತಿಳಿದ್ಮೇಲೆ ನಮ್ಮ ಅಭಿಮಾನಿಗಳ ಕಡೆಯಿಂದ ಗಾಯಗೊಂಡ ಮಹಿಳೆಗೆ ಎಲ್ಲಾ ಸೌಕರ್ಯ ಮಾಡಿಕೊಡಲಾಯ್ತು. ಬೌನ್ಸರ್ ತಳ್ಳಿದ್ದಾರೆ ಅನ್ನೋ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಯುವರಾಜ್‌ಕುಮಾರ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments