ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ತೆಲುಗಿನಲ್ಲೂ ಬಿಡುಗಡೆಯಾಗಲು ಸಿದ್ಧವಾಗಿದೆ.
ಯುವರತ್ನ ತಂಡ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ಸಂಚರಿಸಿ ಸಿನಿಮಾ ಬಗ್ಗೆ ಪ್ರಚಾರ ಮಾಡಲಿದೆ. ಈ ಮೂಲಕ ರಿಲೀಸ್ ಗೂ ಮುನ್ನ ಜನರ ಗಮನ ಸೆಳೆಯಲು ಪ್ರಯತ್ನ ನಡೆಸಲಿದೆ.
ಎಲ್ಲರಿಗೂ ಗೊತ್ತಿರುವ ಹಾಗೆ ಯುವರತ್ನ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಹೀಗಾಗಿ ಅಲ್ಲಿನ ಪ್ರೇಕ್ಷಕರನ್ನು ಸೆಳೆಯಲು ತೆಲುಗಿನಲ್ಲೂ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಯುವರತ್ನ ತಂಡ ಯೋಜನೆ ನಡೆಸಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ.